ಮಂಗಳವಾರ, ಮೇ 17, 2022
27 °C
ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಸಂವಾದ ಕಾರ್ಯಕ್ರಮ

ಈ ಬಾರಿ ಆನ್‌ಲೈನ್‌ನಲ್ಲಿ ‘ಪರೀಕ್ಷಾ ಪೆ ಚರ್ಚಾ‘

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಕುರಿತು ನಡೆಸುವ ಸಂವಾದ ಕಾರ್ಯಕ್ರಮ ‘ಪರೀಕ್ಷಾ ಪೆ ಚರ್ಚಾ‘ – ಈ ವರ್ಷ ಆನ್‌ಲೈನ್‌ನಲ್ಲಿ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಟ್ವೀಟ್‌ ಮಾಡಿದ್ದಾರೆ.

‘ಪ್ರತಿ ವಿದ್ಯಾರ್ಥಿಯೂ ನಿರೀಕ್ಷಿಸುತ್ತಿದ್ದ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮ ಮತ್ತೆ ಬಂದಿದೆ. ಕೋವಿಡ್‌ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆನ್‌ಲೈನ್‌ ಮೂಲಕ ನಡೆಸಲಾಗುತ್ತಿದೆ‘ ಎಂದು ಹೇಳಿದ್ದಾರೆ.

ಪರೀಕ್ಷೆಗಳು ಆರಂಭವಾಗುವ ಮುನ್ನ ಅಂದರೆ, ಮಾರ್ಚ್ ತಿಂಗಳಲ್ಲಿ, 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿಯವರು ಸಂವಾದ ನಡೆಸಲಿದ್ದಾರೆ. 

ಕಾರ್ಯಕ್ರಮದ ನೋಂದಣಿ ಗುರುವಾರದಿಂದ ಪ್ರಾರಂಭವಾಗಿ ಮಾರ್ಚ್ 14 ರಂದು ಮುಕ್ತಾಯಗೊಳ್ಳಲಿದೆ. ಪ್ರಶ್ನೆಗಳನ್ನು ಕೇಳುವ ವಿದ್ಯಾರ್ಥಿಗಳನ್ನು ಸ್ಪರ್ಧೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಧಾನಿಯವರು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಮೊದಲ ಆವೃತ್ತಿ ಕಳೆದ ವರ್ಷ ಫೆ.16ರಂದು ತಾಲ್‌ಕಟೋರಾ ಸ್ಟೇಡಿಯಂನಲ್ಲಿ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು