ಶನಿವಾರ, ಜುಲೈ 31, 2021
21 °C

‘ಒಂದು ಭೂಮಿ, ಒಂದು ಆರೋಗ್ಯ’ ಅಳವಡಿಸಿಕೊಳ್ಳಲು ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ರೋಗವನ್ನು ಜಾಗತಿಕ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಎದುರಿಸಲು ‘ಒಂದು ಭೂಮಿ, ಒಂದು ಆರೋಗ್ಯ’ ವಿಧಾನವನ್ನು ಅಳವಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಲಹೆ ನೀಡಿದರು.

ವರ್ಚುವಲ್ ಆಗಿ ನಡೆದ ಜಿ–7 ಶೃಂಗಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ವಿಶ್ವಮಟ್ಟದಲ್ಲಿ ಏಕತೆ, ಒಗ್ಗಟ್ಟು ಮತ್ತು ನಾಯಕತ್ವ ಅಗತ್ಯ ಎಂದು ಪ್ರತಿಪಾದಿಸಿದರು.

ಸವಾಲನ್ನು ಎದುರಿಸುವಲ್ಲಿ ಪ್ರಜಾಪ್ರಭುತ್ವ ಮತ್ತು ಪಾರದರ್ಶಕ ಸಮಾಜದ ಜವಾಬ್ದಾರಿಗಳನ್ನೂ ಅವರು ಒತ್ತಿ ಹೇಳಿದರು.

ಕೋವಿಡ್ ಸಂಬಂಧಿತ ತಂತ್ರಜ್ಞಾನ ಗಳ ಹಕ್ಕುಸ್ವಾಮ್ಯವನ್ನು ಕೈಬಿಡಲು ಭಾರತ ಮತ್ತು ದಕ್ಷಿಣ ಆಫ್ರಿಕಾ, ವಿಶ್ವ ವ್ಯಾಪಾರ ಸಂಘಟನೆಗೆ (ಡಬ್ಲ್ಯುಟಿಒ) ಸಲ್ಲಿಸಿರುವ ಪ್ರಸ್ತಾವಕ್ಕೆ ಜಿ–7 ದೇಶಗಳ ಬೆಂಬಲವನ್ನು ಅವರು ಯಾಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು