ಮಂಗಳವಾರ, ಸೆಪ್ಟೆಂಬರ್ 28, 2021
21 °C

ಪೆಗಾಸಸ್‌ ಗೂಢಚರ್ಯೆ: ಪ್ರಧಾನಿ, ಗೃಹ ಸಚಿವರ ಸ್ಪಷ್ಟನೆಗೆ ಶಿವಸೇನಾ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಪೆಗಾಸಸ್‌ ತಂತ್ರಾಂಶದ ಮೂಲಕ ಪತ್ರಕರ್ತರು ಸೇರಿದಂತೆ ದೇಶದ ವಿವಿಧ ವರ್ಗಗಳ ಜನರ ಮೇಲೆ ಕಣ್ಗಾವಲು ನಡೆಸುತ್ತಿರುವ ಆರೋಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್‌ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್‌, ’ಇಂಥ ಕ್ರಮಗಳಿಂದಾಗಿ ಸರ್ಕಾರ ಮತ್ತು ಆಡಳಿತ ಎರಡೂ ದುರ್ಬಲವಾಗಿವೆ ಎಂಬುದನ್ನು ಸಾಬೀತುಪಡಿಸುತ್ತವೆ ಎಂದು  ತಿಳಿಸಿದರು.

’ಪ್ರಸ್ತುತ ದೇಶದಲ್ಲಿ ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಪ್ರಧಾನಿ ಮತ್ತು ಗೃಹ ಸಚಿವರು, ಈ ವಿಷಯದ ಬಗ್ಗೆ ತಕ್ಷಣವೇ ಸ್ಪಷ್ಟನೆ ನೀಡಬೇಕು’ ಎಂದು ರಾವುತ್‌ ಒತ್ತಯಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು