ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಬಸ್ ಅಪಘಾತ: 14 ಮಂದಿ ಸಾವು, ಇಬ್ಬರಿಗೆ ಗಾಯ

ಮೃತರ ಕುಟುಂಬಗಳಿಗೆ ತಲಾ ₹ 2 ಲಕ್ಷ ಘೋಷಿಸಿದ ಪ್ರಧಾನಿ
Last Updated 22 ಫೆಬ್ರುವರಿ 2022, 7:43 IST
ಅಕ್ಷರ ಗಾತ್ರ

ನವದೆಹಲಿ: ಮದುವೆ ಸಮಾರಂಭ ಮುಗಿಸಿ ತೆರಳುತ್ತಿದ್ದಬಸ್‌ವೊಂದು ಚಂಪಾವತ್ ಜಿಲ್ಲೆಯ ಬುದಮ್ ಗ್ರಾಮದ ಸುಖೀದಂಗ್ ರೀತಾ ಸಾಹಿಬ್ ರಸ್ತೆಯಲ್ಲಿ ಕಮರಿಗೆ ಉರುಳಿದ ದುರ್ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

'ಮದುವೆ ಮುಗಿಸಿಕೊಂಡು ತೆರಳುತ್ತಿದ್ದ ಬಸ್‌ಇಂದು (ಮಂಗಳವಾರ) ಮುಂಜಾನೆ ಅಪಘಾತಕ್ಕೀಡಾಗಿದೆ. ಈ ವೇಳೆ 14 ಮಂದಿ ಮೃತಪಟ್ಟಿದ್ದಾರೆ' ಎಂದು ಕಮೌನ್ ಪ್ರಾಂತ್ಯದ ಡಿಐಜಿ ನಿಲೇಶ್ ಆನಂದ್ ಭರ್ನೆ ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್‌) ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡಿರುವವರಿಗೂ ತಲಾ ₹ 50,000 ನೆರವು ಪ್ರಕಟಿಸಿದ್ದಾರೆ.

ಈ ಮಾಹಿತಿಯನ್ನು ಪ್ರಧಾನಿ ಕಚೇರಿಯು ಟ್ವಿಟರ್ ಮೂಲಕ ತಿಳಿಸಿದ್ದು, 'ಉತ್ತರಾಖಂಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ಪಿಎಂಎನ್‌ಆರ್‌ಎಫ್‌ನಿಂದ ತಲಾ ₹ 2 ಲಕ್ಷ ಪರಿಹಾರ ಮತ್ತು ಗಾಯಗೊಂಡಿರುವವರಿಗೆ ತಲಾ ₹ 50,000 ನೆರವು ಘೋಷಿಸಿದ್ದಾರೆ' ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT