ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದ ‘ಡಬಲ್ ಎಂಜಿನ್ ಸರ್ಕಾರ’ ಅಭಿವೃದ್ಧಿಗೆ ಬದ್ಧವಾಗಿದೆ: ಪ್ರಧಾನಿ ಮೋದಿ

Last Updated 1 ನವೆಂಬರ್ 2020, 6:53 IST
ಅಕ್ಷರ ಗಾತ್ರ

ಛಪ್ರಾ: ಬಿಹಾರದ ‘ಡಬಲ್ ಎಂಜಿನ್ ಸರ್ಕಾರ’ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಛಪ್ರಾದಲ್ಲಿ ಚುನಾವಣಾ ಪ್ರಚಾರ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

‘ಬಿಹಾರದ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದ್ದರೆ ಇಬ್ಬರು ‘ಯುವರಾಜ’ರು, ಈ ಪೈಕಿ ಒಬ್ಬ ‘ಜಂಗಲ್‌ ರಾಜ್‌’ನಿಂದ ಬಂದವರು, ತಮ್ಮದೇ ಸಿಂಹಾಸನ ರಕ್ಷಿಸಿಕೊಳ್ಳಲು ಹೋರಾಡುತ್ತಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.

‘3–4 ವರ್ಷಗಳ ಹಿಂದೆ ಉತ್ತರ ಪ್ರದೇಶ ಚುನಾವಣೆ ವೇಳೆ ಈ ಇಬ್ಬರು ಯುವರಾಜರು ಬಸ್‌ನ ಟಾಪ್‌ ಮೇಲೆ ಹತ್ತಿ, ಕಪ್ಪು ಜಾಕೆಟ್‌ಗಳನ್ನು ಧರಿಸಿಕೊಂಡು ಹಳ್ಳಿಗಳಿಗೆ ಭೇಟಿ ನೀಡಿದ್ದನ್ನು ನೀವು ನೋಡಿರಬಹುದು’ ಎಂದೂ ಮೋದಿ ವ್ಯಂಗ್ಯವಾಡಿದ್ದಾರೆ.

ಬಿಹಾರದಲ್ಲಿ ಎನ್‌ಡಿಎಯು ಮತ್ತೊಮ್ಮೆ ಸರ್ಕಾರ ರಚಿಸುವ ವಿಶ್ವಾಸವಿದೆ. ಮೊದಲ ಹಂತದ ಮತದಾನದ ಬಳಿಕ ಇದು ದೃಢಪಟ್ಟಿದೆ ಎಂದೂ ಅವರು ಹೇಳಿದ್ದಾರೆ.

‘ಬಿಹಾರದ ಜನತೆ ರಾಜಕೀಯ ಪಂಡಿತರ ಮಾತುಗಳನ್ನು ಸುಳ್ಳಾಗಿಸಿದ್ದಾರೆ. ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಮೊದಲ ಹಂತದಲ್ಲಿ ಅತ್ಯಧಿಕ ಮತದಾನವಾಗಿದೆ’ ಎಂದು ಮೋದಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT