ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

Last Updated 2 ಡಿಸೆಂಬರ್ 2021, 9:09 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿನ ಚಂಡಮಾರುತ ಪರಿಸ್ಥಿತಿಯ ಅವಲೋಕನದ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಗಾಳ ಕೊಲ್ಲಿ, ಆಂಧ್ರ ಪ್ರದೇಶ ಮತ್ತು ಒಡಿಶಾ ತೀರ ಪ್ರದೇಶಗಳಲ್ಲಿನಚಂಡಮಾರುತ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರ ಪ್ರದೇಶ, ಒಡಿಶಾ ಹಾಗೂ ಪಶ್ಚಿಮ ಬಂಗಾಳಕ್ಕೆ ಡಿಸೆಂಬರ್‌ 4ರಂದು ಚಂಡಮಾರುತ ಅಪ್ಪಳಿಸಲಿದೆ. ಇದರಿಂದಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ 14 ಜಿಲ್ಲೆಗಳಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆಒಡಿಶಾ ರಾಜ್ಯ ಸರ್ಕಾರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT