ಗುರುವಾರ , ನವೆಂಬರ್ 26, 2020
21 °C

ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

PM Narendra Modi

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ಅವರು ಅಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಉತ್ಸಾಹಿ ಯುವಕರಾಗಿದ್ದರು ಎಂದು ಹೇಳಿದ್ದಾರೆ.

ಕುಲ್ಗಾಂ ಜಿಲ್ಲೆಯ ಮೂವರು ಬಿಜೆಪಿ ಕಾರ್ಯಕರ್ತರನ್ನು ಉಗ್ರರು ಗುರುವಾರ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ನಮ್ಮ ಮೂವರು ಕಾರ್ಯಕರ್ತರ ಹತ್ಯೆಯಾಗಿರುವುದನ್ನು ನಾನು ಖಂಡಿಸುತ್ತೇನೆ. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದ ಯುವಕರಾಗಿದ್ದರು ಎಂದಿದ್ದಾರೆ.

ಕುಲ್ಗಾಮ್ ಜಿಲ್ಲೆಯ ವೈ.ಕೆ. ಪೊರಾ ಪ್ರದೇಶದಲ್ಲಿ ಗುರುವಾರ ಸಂಜೆ ಫಿದಾ ಹುಸೈನ್‌, ಉಮರ್‌ ಹಜಾಮ್‌ ಮತ್ತು ಉಮರ್‌ ರಶೀದ್‌ ಬೇಗ್‌ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ಖಾಜಿಗುಂಡ್‌ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ಲಷ್ಕರ್‌ ಎ ತೊಯಬಾ ಭಯೋತ್ಪಾದಕ ಸಂಘಟನೆ ಜೊತೆಗೆ ಗುರುತಿಸಿಕೊಂಡಿರುವ ‘ದ ರೆಸಿಸ್ಟನ್ಸ್ ಫ್ರಂಟ್‌’ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು