ಶಿಮ್ಲಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಗುರುವಾರ) ಹಿಮಾಚಲ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.
ಉನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು. ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.
ಈ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶಿಯವಾಗಿ ವಿನ್ಯಾಸಗೊಳಿಸಲಾದ ಸೆಮಿ ಹೈಸ್ಪೀಡ್ ರೈಲುಗಳನ್ನು ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲು ಯೋಜನೆಯಡಿಯಲ್ಲಿ ನವದೆಹಲಿ - ವಾರಾಣಸಿ, ನವದೆಹಲಿ - ಕತ್ರಾ ಹಾಗೂ ಗಾಂಧಿನಗರ ಮತ್ತು ಮುಂಬೈ ನಡುವೆ ಓಡಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.