ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿ ಭೂಕಂಪ: ಭಾರತ ತಂಡದ ಕೆಲಸಕ್ಕೆ ಪ್ರಧಾನಿ ಮೋದಿ ಶ್ಲಾಘನೆ

Last Updated 20 ಫೆಬ್ರವರಿ 2023, 19:30 IST
ಅಕ್ಷರ ಗಾತ್ರ

ನವದೆಹಲಿ: ಭೂಕಂಪ ಪೀಡಿತ ಟರ್ಕಿ ದೇಶದಲ್ಲಿ ನಿಯೋಜನೆಗೊಂಡಿರುವ ಭಾರತದ ನೆರವು ಮತ್ತು ವಿಪತ್ತು ನಿರ್ವಹಣೆ ತಂಡಗಳ ಕಾರ್ಯಾಚರಣೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಶ್ಲಾಘಿಸಿದ್ದಾರೆ.

ಟರ್ಕಿಯಿಂದ ಹಿಂತಿರುಗಿದ ತಂಡಗಳ ಸಿಬ್ಬಂದಿಯನ್ನು ಉದ್ದೇಶಿಸಿದ ಮಾತನಾಡಿದ ಅವರು, ‘ಕೆಲವೇ ವರ್ಷಗಳಲ್ಲಿ ಭಾರತವು ಸ್ವಾವಲಂಬಿ ದೇಶವಾಗಿ ತನ್ನ ಗುರುತನ್ನು ಸಾಬೀತುಪಡಿಸಿದ್ದು, ನಿಸ್ವಾರ್ಥವಾಗಿ ಇತರ ದೇಶಗಳಿಗೆ ಸಹಾಯ ಹಸ್ತ ಚಾಚುವಂತಾಗಿದೆ. ಭೂಕಂಪಪೀಡಿತ ಪ್ರದೇಶಗಳಲ್ಲಿ ನಮ್ಮ ದೇಶದ ತಂಡವು ಮಾನವೀಯತೆಯಿಂದ ಸೇವೆ ಮಾಡಿದ್ದು, ಇದರಿಂದ ಇಡೀ ದೇಶವೇ ಹೆಮ್ಮೆಪಡುವಂತಾಗಿದೆ’ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಭೂಕಂಪಪೀಡಿತ ಟರ್ಕಿಗೆ ಎಲ್ಲ ರೀತಿಯ ನೆರವು ನೀಡುವಂತೆ ಫೆ. 7ರಂದು ಮೋದಿ ಸೂಚಿಸಿದ್ದರು. ಅಂತೆಯೇ ಮೂರು ಎನ್‌ಡಿಆರ್‌ಎಫ್ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿತ್ತು. ಭೂಕಂಪಪೀಡಿತ ಜನರಿಗೆ ವೈದ್ಯಕೀಯ ಸೇವೆ ಒದಗಿಸಲು ಭಾರತೀಯ ಸೇನೆಯು ವೈದ್ಯಕೀಯ ತಂಡವನ್ನೂ ನಿಯೋಜಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT