ಗುರುವಾರ , ಜೂನ್ 24, 2021
25 °C
ರಾಷ್ಟ್ರೀಯ ತಂತ್ರಜ್ಞಾನ ದಿನ

ರಾಷ್ಟ್ರೀಯ ತಂತ್ರಜ್ಞಾನ ದಿನ: ವಿಜ್ಞಾನಿಗಳು, ಸಂಶೋಧಕರ ಕಾರ್ಯ ಶ್ಲಾಘಿಸಿದ ಪ್ರಧಾನಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಎಂಥದ್ದೇ ಸವಾಲಿನ ಪರಿಸ್ಥಿತಿಯಲ್ಲೂ ನಮ್ಮ ದೇಶದ ವಿಜ್ಞಾನಿಗಳು ಮತ್ತು ಸಂಶೋಧಕರು ಹೋರಾಡಿ, ಗೆಲುವು ಸಾಧಿಸುತ್ತಾರೆ. ಕೋವಿಡ್‌ 19 ಪಿಡುಗಿನ ವಿರುದ್ಧದ ಹೋರಾಟದಲ್ಲೂ ಹಾಗೆಯೇ ಶ್ರಮಿಸುತ್ತಿದ್ದಾರೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.

ಮಂಗಳವಾರ ‘ರಾಷ್ಟ್ರೀಯ ತಂತ್ರಜ್ಞಾನ ದಿನ‘ದ ಅಂಗವಾಗಿ ದೇಶದ ವಿಜ್ಞಾನಿಗಳು, ತಂತ್ರಜ್ಞರು, ಸಂಶೋಧಕರ ಕಾರ್ಯವನ್ನು ಪ್ರಧಾನಿ ಸ್ಮರಿಸಿದರು.

1998ರಲ್ಲಿ ನಡೆಸಿದ ಫೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಮೇ 11 ಅನ್ನು ‘ರಾಷ್ಟ್ರೀಯ ತಂತ್ರಜ್ಞಾನ ದಿನ‘ವನ್ನು ಆಚರಿಸಲಾಗುತ್ತಿದೆ. ಈ ದಿನದಂದು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತೀಯರ ಕೊಡುಗೆಗಳ ಮತ್ತು ಸಾಧನೆಗಳನ್ನು ಸ್ಮರಿಸಲಾಗುತ್ತದೆ. 

‘ರಾಷ್ಟ್ರೀಯ ತಂತ್ರಜ್ಞಾನ ದಿನದಂದು, ತಂತ್ರಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿರುವ ಹಾಗೂ ಕಠಿಣ ಪರಿಶ್ರಮದೊಂದಿಗೆ ದೇಶದ ಏಳಿಗೆಗೆ ಶ್ರಮಿಸುತ್ತಿರುವ ವಿಜ್ಞಾನಿಗಳಿಗೆ ನಾವು ನಮಸ್ಕರಿಸುತ್ತೇವೆ‘ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘1998ರಲ್ಲಿ ಪೋಕ್ರಾನ್‌ನಲ್ಲಿ ನಡೆದ ಅಣ್ವಸ್ತ್ರ ಪರೀಕ್ಷೆಯನ್ನು ಹೆಮ್ಮೆಯಿಂದ ನೆನಪಿಸಿಕೊಳ್ಳುತ್ತೇವೆ. ಆ ಅಣ್ವಸ್ತ್ರ ಪರೀಕ್ಷಾ ಪ್ರದರ್ಶನ ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪರಾಕ್ರಮವನ್ನು ಸಾಕ್ಷ್ಯೀಕರಿಸುತ್ತದೆ‘ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು