ಮಂಗಳವಾರ, ಅಕ್ಟೋಬರ್ 26, 2021
20 °C

ಉತ್ತರ ಪ್ರದೇಶ: 75 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರಿಸಿದ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಪ್ರಧಾನ ಮಂತ್ರಿ ಆವಾಸ್ ಯೋಜನೆ–ನಗರ(ಪಿಎಂಎವೈ–ಯು) ಯೋಜನೆಯಡಿ ಉತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡ 75 ಸಾವಿರ ಮನೆಗಳ ಕೀಲಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ವರ್ಚುವಲ್‌ ರೂಪದಲ್ಲಿ ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಇಲ್ಲಿ ನಡೆದ ‘ಅಜಾದಿ @75–ನ್ಯೂ ಅರ್ಬನ್ ಇಂಡಿಯಾ: ಟ್ರಾನ್ಸ್‌ಫಾರ್ಮಿಂಗ್ ಅರ್ಬನ್ ಲ್ಯಾಂಡ್‌ಸ್ಕೇಪ್‌’ ಕುರಿತು ವಿಚಾರಣ ಸಂಕಿರಣ ಮತ್ತು ಎಕ್ಸ್‌ಪೊ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ಅವರು, ಪಿಎಂಎವೈ–ಯು ಫಲಾನುಭವಿಗಳಿಗೆ ಆನ್‌ಲೈನ್ ಮೂಲಕ ಕೀಗಳನ್ನು ಹಸ್ತಾಂತರಿಸಿದರು. ನಂತರ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಓದಿ: 

ಇಲ್ಲಿನ ಇಂದಿರಾಗಾಂಧಿ ಪ್ರತಿಷ್ಠಾನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು, ಎಕ್ಸ್‌ಪೋದಲ್ಲಿದ್ದ ಮೂರು ಪ್ರದರ್ಶನಗಳನ್ನು ವೀಕ್ಷಿಸಿದರು. ನಂತರ ಪ್ರಧಾನಿಯವರು ಅಯೋಧ್ಯೆ ಅಭಿವೃದ್ಧಿಯ ಮಾಸ್ಟರ್‌ ಪ್ಲಾನ್‌ ಕುರಿತು ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು