ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿಗೆ ರ‍್ಯಾಲಿ ನಡೆಸಲು ಸಮಯವಿದೆ, ರೈತರನ್ನು ಭೇಟಿ ಮಾಡಲು ಸಮಯವಿಲ್ಲ: ಪವಾರ್

Last Updated 7 ಮಾರ್ಚ್ 2021, 12:06 IST
ಅಕ್ಷರ ಗಾತ್ರ

ರಾಂಚಿ (ಜಾರ್ಖಂಡ್): ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕೋಲ್ಕತ್ತಗೆ ಹೋಗಿ ರ‍್ಯಾಲಿ ನಡೆಸಲು ಸಮಯವಿದೆ. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭೇಟಿ ಮಾಡಲು ಸಮಯವಿಲ್ಲ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಟೀಕೆ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿರಿಸಿಕೊಂಡು ಪ್ರಧಾನಿ ಮೋದಿ ಬೃಹತ್ ರ‍್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿಗಳಲ್ಲಿ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಬಿಕ್ಕಟ್ಟು ಇತ್ಯರ್ಥ ಮಾಡಲು ಕೇಂದ್ರ ಸರ್ಕಾರ ಮುಂದಾಗದಿರುವುದು ಪವಾರ್ ಆಕ್ರೋಶಕ್ಕೆ ಕಾರಣವಾಗಿದೆ.

ಶರದ್ ಪವಾರ್ ರಾಂಚಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ದೇಶದಲ್ಲಿ 'ಕೋಮು ವಿಷ' ಹರಡುತ್ತಿದೆ ಎಂದು ಪವಾರ್ ಆರೋಪಿಸಿದರು.

ಭಾತೃತ್ವ ಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಬಿಜೆಪಿ ದೇಶದಲ್ಲಿ ಕೋಮು ವಿಷ ಪಸರಿಸುತ್ತಿದೆ. ರೈತರು 100 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿಗೆ ಪಶ್ಚಿಮ ಬಂಗಾಳ ಸರ್ಕಾರ ವಿರುದ್ಧ ಮಾತನಾಡಲು ಕೋಲ್ಕತ್ತಗೆ ಹೋಗಲು ಸಮಯವಿದೆ. ಆದರೆ ದೆಹಲಿಯಲ್ಲಿರುವ ರೈತರನ್ನು ಭೇಟಿ ಮಾಡಲು ಸಮಯವಿಲ್ಲ ಎಂದು ಆರೋಪಿಸಿದರು.

ಕೋಲ್ಕತ್ತದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಭಾನುವಾರದಂದು ಪ್ರಧಾನಿ ಮೋದಿ ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

ಅದೇ ಹೊತ್ತಿಗೆ ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರಿ ಏಜೆನ್ಸಿಗಳನ್ನು ಬಳಕೆ ಮಾಡುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT