ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ಸಮುದಾಯದ ‘ಆದಿ ಮಹೋತ್ಸವ‘ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Last Updated 16 ಫೆಬ್ರುವರಿ 2023, 8:01 IST
ಅಕ್ಷರ ಗಾತ್ರ

ನವದೆಹಲಿ: ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕ ಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸುವ ಆದಿ ಮಹೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟನೆ ಮಾಡಿದರು.

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸುವ ಮೂಲಕ ಆದಿ ಮಹೋತ್ಸವಕ್ಕೆ ಚಾಲನೆ ನೀಡಿದರು.

ನಂತರ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಮೋದಿ ಹೇಳಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಭಾಗವಹಿಸಿದ್ದರು.

ದೇಶದಾದ್ಯಂತ ಬುಡಕಟ್ಟು ಸಮುದಾಯಗಳ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಸುಮಾರು 200ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದ

ಆದಿ ಮಹೋತ್ಸವದಲ್ಲಿ ಸುಮಾರು ಒಂದು ಸಾವಿರ ಬುಡಕಟ್ಟು ಕುಶಲಕರ್ಮಿಗಳು ಭಾಗವಹಿಸಿದ್ದಾರೆ. ಫೆಬ್ರುವರಿ 27ರವರೆಗೂ ಆದಿ ಮಹೋತ್ಸವ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT