ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಕಿಸಾನ್ ಸೂರ್ಯೋದಯ ಸೇರಿ ಮೂರು ಯೋಜನೆಗಳ ಉದ್ಘಾಟಿಸಿದ ಪ್ರಧಾನಿ ಮೋದಿ

Last Updated 24 ಅಕ್ಟೋಬರ್ 2020, 9:39 IST
ಅಕ್ಷರ ಗಾತ್ರ

ಅಹಮದಾಬಾದ್: ರೈತರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಗುಜರಾತ್‌ನಲ್ಲಿನ ಮೂರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ರೈತರಿಗೆ ನೀರಾವರಿಗಾಗಿ ಹಗಲುಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಇತ್ತೀಚೆಗೆ ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿದ್ದರು. ಈ ಯೋಜನೆಯಡಿ ಬೆಳಿಗ್ಗೆ 5ರಿಂದ ರಾತ್ರಿ 9ರ ವರೆಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಇದಕ್ಕಾಗಿ ಬಜೆಟ್‌ನಲ್ಲಿ ₹3,500 ಕೋಟಿ ಘೋಷಿಸಲಾಗಿತ್ತು. 2023ರ ಒಳಗೆ ಟ್ರಾನ್ಸ್‌ಮಿಷನ್ ಮೂಲಸೌಕರ್ಯ ಒದಗಿಸುವ ಗುರಿ ಹೊಂದಲಾಗಿದೆ.

ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್‌ ಕಾರ್ಡಿಯಾಲಜಿ ಆ್ಯಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಹಾರ್ಟ್ ಆಸ್ಪತ್ರೆಯನ್ನೂ ಮೋದಿ ಉದ್ಘಾಟಿಸಿದ್ದಾರೆ. ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ಟೆಲಿ–ಕಾರ್ಡಿಯಾಲಜಿಗಾಗಿ ಅಭಿವೃದ್ಧಿಪಡಿಸಿದ ಮೊಬೈಲ್ ಆ್ಯಪ್‌ ಅನ್ನು ಉದ್ಘಾಟನೆ ಮಾಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಇತರ ಸಚಿವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT