ಗುರುವಾರ , ನವೆಂಬರ್ 26, 2020
21 °C

ಮೋದಿ ಸೈನಿಕರಿಗೆ ಅವಮಾನ ಮಾಡಿದ್ದಾರೆ: ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹಿಸುವಾ: ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಸುಳ್ಳು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸೈನಿಕರಿಗೆ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿ ಮಾತನಾಡಿದ ರಾಹುಲ್‌ ಗಾಂಧಿ,‘ ಚೀನಾದ ಸೈನ್ಯವು ಭಾರತದ ಭೂಪ್ರದೇಶಕ್ಕೆ ನುಸುಳಿದೆ. ಭಾರತದ 1,200 ಕಿ.ಮೀ ಭೂ ಪ್ರದೇಶವನ್ನು ಅವರು ಅತಿಕ್ರಮಿಸಿದ್ದಾರೆ. ಚೀನಾದ ಸೈನಿಕರು ಭಾರತದೊಳಗೆ ನುಸುಳಿದ್ದರೂ, ಪ್ರಧಾನಿ ಏಕೆ ಸುಳ್ಳು ಹೇಳಿ ನಮ್ಮ ಸೈನಿಕರನ್ನು ಅವಮಾನಿಸುತ್ತಿದ್ದಾರೆ. ಚೀನಾದ ಸೈನಿಕರನ್ನು ಯಾವಾಗ ಭಾರತದಿಂದ ಹೊರ ಹಾಕುತ್ತೀರಿ’ ಎಂದು ಅವರು ಪ್ರಶ್ನಿಸಿದ್ದಾರೆ. 

‘ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರು ಬಹಳ ತೊಂದರೆ ಎದುರಿಸಿದ್ದಾರೆ. ಇತರೆ ರಾಜ್ಯಗಳು ಬಿಹಾರದವರನ್ನು ಊರಿನಿಂದ ಓಡಿಸುತ್ತಿದ್ದಾಗ ಮೋದಿ ಅವರು ಏನು ಸಹಾಯ ಮಾಡಿದ್ದಾರೆ ಎಂದು ರಾಹುಲ್‌ ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು