ಶುಕ್ರವಾರ, ಅಕ್ಟೋಬರ್ 7, 2022
24 °C

ಅಮೃತ ಭಾರತಿಗೆ ಕನ್ನಡದ ಆರತಿ: ಮೋದಿ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಮೋದಿ, ‘ಇದೊಂದು ವಿಶಿಷ್ಟವಾದ ಅಭಿಯಾನ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ ಏನು‌ ಎಂಬ ವಿಚಾರಗಳನ್ನು ಈ ಕಾರ್ಯಕ್ರಮ ಒಳಗೊಂಡಿದೆ. ಸ್ವಾತಂತ್ರ್ಯಕ್ಕೆ ಸಂಬಂಧಪಟ್ಟಂತೆ 75 ವ್ಯಕ್ತಿ, 75  ಸ್ಥಳಗಳ‌ ಪರಿಚಯ, 75 ವ್ಯಕ್ತಿಗಳಿಗೆ ಸಂಬಂಧಪಟ್ಟ ಪುಸ್ತಕ‌ ಪ್ರಕಟಣೆ ಶ್ಲಾಘನೀಯವಾಗಿದೆ’ ಎಂದಿದ್ದಾರೆ.

‘ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಖುಷಿ ತಂದಿದೆ. ರಾಷ್ಟ್ರಭಕ್ತಿಯನ್ನು ಬಡಿದೆಬ್ಬಿಸುವ ಉದ್ದೇಶದಿಂದ ರೂಪಿಸಿದ್ದ ಈ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದಲ್ಲಿ‌ ಮೆಚ್ಚುಗೆ ಸಿಕ್ಕಿರುವುದು ನನ್ನ ಜವಾಬ್ದಾರಿಯನ್ನು‌ ಇನ್ನಷ್ಟು‌ ಹೆಚ್ಚಿಸಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್‌ ಕುಮಾರ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು