ಭಾನುವಾರ, ಸೆಪ್ಟೆಂಬರ್ 19, 2021
24 °C

ಇತ್ತೀಚಿನ ಮಹತ್ವದ ಬೆಳವಣಿಗೆಗಳಿಂದ ಭಾರತೀಯರಿಗೆ ಹರ್ಷ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದ ಸ್ವಾತಂತ್ರ್ಯೋತ್ಸವದ 'ಅಮೃತ ಮಹೋತ್ಸವ' ಆರಂಭವಾಗುತ್ತಿದ್ದಂತೆ ಹಲವು ಮಹತ್ವದ ಬೆಳವಣಿಗೆಗಳು ನಡೆದಿದ್ದು, ಇದು ಭಾರತೀಯರಿಗೆ ಹರ್ಷ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದರು.

‘ಭಾರತವು ಆಗಸ್ಟ್‌ ತಿಂಗಳು (ಅಮೃತ ಮಹೋತ್ಸವ ಪ್ರಾರಂಭ) ಪ್ರವೇಶಿಸುತ್ತಿದ್ದಂತೆ ಹಲವು ಮಹತ್ವದ ಘಟನೆಗಳು ನಡೆದಿವೆ. ದಾಖಲೆ ಪ್ರಮಾಣದಲ್ಲಿ ಲಸಿಕೆ ವಿತರಣೆ, ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚಳ ಸೇರಿದಂತೆ ಇತರೆ ಬೆಳವಣಿಗೆಗಳು ಭಾರತೀಯರಿಗೆ ಹರ್ಷ ತಂದುಕೊಟ್ಟಿದೆ. ಅಲ್ಲದೆ ಇದು ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿದೆ ಎಂಬುದನ್ನು ಸೂಚಿಸುತ್ತದೆ’ ಎಂದು ಅವರು ಟ್ವೀಟ್‌ ಮೂಲಕ ಹರ್ಷ ವ್ಯಕ್ತಪಡಿಸಿದರು.

‘ಒಲಿಂಪಿಕ್ಸ್‌ನಲ್ಲಿ ಪಿ.ವಿ. ಸಿಂಧು ಅವರು ದೇಶಕ್ಕಾಗಿ ಪದಕ ಗಳಿಸಿದ್ದರಲ್ಲದೇ ನಮ್ಮ ಮಹಿಳಾ ಮತ್ತು ಪುರುಷ ಹಾಕಿ ತಂಡವು ಉತ್ತಮ ಪ್ರದರ್ಶನ ನೀಡುತ್ತಿದೆ’ ಎಂದು ಅವರು ಶ್ಲಾಘಿಸಿದರು.

‘ಭಾರತದ 130 ಕೋಟಿ ಜನರು ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಭಾರತದ ಏಳಿಗೆಗಾಗಿ ಇನ್ನಷ್ಟು ಶ್ರಮಿಸಲಿದ್ದಾರೆ ಎಂಬ ನಿರೀಕ್ಷೆ ನನಗಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು