ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3ನೇ ಅಲೆ ತಡೆಗೆ ಯತ್ನಿಸಿ: ಮುಖ್ಯಮಂತ್ರಿಗಳ ಜತೆ ಸಭೆಯಲ್ಲಿ ಪ್ರಧಾನಿ ಮೋದಿ ಸೂಚನೆ

Last Updated 17 ಜುಲೈ 2021, 3:43 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ನ ಸಂಭಾವ್ಯ ಮೂರನೇ ಅಲೆಯನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಈ ಸಾಂಕ್ರಾಮಿಕದಿಂದ ಅತಿ ಹೆಚ್ಚು ತೊಂದರೆಗೆ ಒಳಗಾಗಿರುವ ಆರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸೂಚಿಸಿದ್ದಾರೆ.

ತಮಿಳನಾಡು, ಆಂಧ್ರ ಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ ಮತ್ತು ಕೇರಳದ ಮುಖ್ಯಮಂತ್ರಿಗಳ ಜತೆಗೆ ಪ್ರಧಾನಿ ವಿಡಿಯೊ ಕಾನ್ಫರೆನ್ಸ್‌ ನಡೆಸಿದ್ದಾರೆ. ಈ ರಾಜ್ಯಗಳಲ್ಲಿ ದೇಶದ ಶೇ 80ರಷ್ಟು ಹೊಸ ಪ್ರಕರಣಗಳು ಕಳೆದ ವಾರ ವರದಿಯಾಗಿವೆ ಎಂದು ಪ್ರಧಾನಿ ಹೇಳಿದ್ದಾರೆ.

ತಮ್ಮ ರಾಜ್ಯಗಳ ಆರೋಗ್ಯ ವ್ಯವಸ್ಥೆಯಲ್ಲಿನ ಲೋಪ ಸರಿಪಡಿಸಲು₹23 ಸಾವಿರ ಕೋಟಿಯ ಕೋವಿಡ್‌ ತುರ್ತು ಪ್ರತಿಸ್ಪಂದನಾ ನಿಧಿಯನ್ನು ಬಳಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.

‘ಎರಡನೇ ಅಲೆ ಶುರುವಾದ ರಾಜ್ಯಗಳಲ್ಲಿಯೇ ಮೊದಲಿಗೆ ಸಾಂಕ್ರಾಮಿಕವು ನಿಯಂತ್ರಣಕ್ಕೆ ಬರಬಹುದು ಎಂದು ಪರಿಣತರು ಅಂದಾಜಿಸಿದ್ದರು. ಆದರೆ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT