ನವದೆಹಲಿ: ದೇಶದಾದ್ಯಂತ ನೂರು ಕೋಟಿ ಡೋಸ್ ಕೋವಿಡ್–19 ಲಸಿಕೆ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ತಯಾರಿಕಾ ಕಂಪನಿಗಳ ಪ್ರತಿನಿಧಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ಜೈಡಸ್ ಕ್ಯಾಡಿಲಾ, ಬಯಾಲಾಜಿಕಲ್ ಇ, ಜೆನೋವಾ ಬಯೋಫಾರ್ಮಾ ಮತ್ತು ಪ್ಯಾನೇಸಿಯಾ ಬಯೋಟೆಕ್ ಪ್ರತಿನಿಧಿಗಳನ್ನು ಮೋದಿ ಭೇಟಿ ಮಾಡಿದ್ದಾರೆ. ಲಸಿಕೆ ವಿಚಾರದಲ್ಲಿ ಇನ್ನಷ್ಟು ಸಂಶೋಧನೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಅವರ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಓದಿ:ಫೈಜರ್ ಲಸಿಕೆ ಮಕ್ಕಳಿಗೆ ಹೆಚ್ಚು ಪರಿಣಾಮಕಾರಿ– ಎಫ್ಡಿಎ ವರದಿ

ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ, ಆರೋಗ್ಯ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತೀ ಪ್ರವೀಣ್ ಪವಾರ್ ಸಹ ಮಾತುಕತೆ ವೇಳೆ ಪ್ರಧಾನಿ ಜತೆಗಿದ್ದರು.

ಗುರುವಾರ ದೇಶದಲ್ಲಿ ಕೋವಿಡ್–19 ಲಸಿಕೆ ವಿತರಣೆ 100 ಕೋಟಿ ದಾಟಿತ್ತು. ದೇಶದಾದ್ಯಂತ 18 ವರ್ಷ ಮೇಲ್ಪಟ್ಟ ಶೇ 75ಕ್ಕೂ ಹೆಚ್ಚು ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.