ಶುಕ್ರವಾರ, ಜೂನ್ 25, 2021
21 °C

ಲಸಿಕೆ ಜತೆಗೆ ಪ್ರಧಾನಿಯೂ ಕಾಣೆ: ರಾಹುಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19ರ ಸಾಂಕ್ರಾಮಿಕ ಸಮಯದಲ್ಲಿ ಲಸಿಕೆಗಳು, ಆಮ್ಲಜನಕ, ಔಷಧಿಗಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರೂ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ಮಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಲಸಿಕೆ, ಆಮ್ಲಜನಕ, ಔಷಧಿಗಳ ಜತೆಗೆ ಪ್ರಧಾನಿಯೂ ಕಾಣೆಯಾಗಿದ್ದಾರೆ. ಉಳಿದಿರುವುದು ಸೆಂಟ್ರಲ್‌ ವಿಸ್ತಾ ಯೋಜನೆ, ಔಷಧಿಗಳ ಮೇಲಿನ ಜಿಎಸ್‌ಟಿ ಮತ್ತು ಅಲ್ಲಲ್ಲಿ ಪ್ರಧಾನಿ ಅವರ ಫೋಟೊಗಳು ಮಾತ್ರ ಇವೆ’ ಎಂದು ವ್ಯಂಗ್ಯವಾಡಿದ್ದಾರೆ.

ಕೋವಿಡ್‌–19ರ ಎರಡನೇ ಅಲೆಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು