ಶುಕ್ರವಾರ, ಅಕ್ಟೋಬರ್ 2, 2020
24 °C

ಸಮಾಜ ಸುಧಾರಕ ನಾರಾಯಣ ಗುರು ದೂರದೃಷ್ಟಿಯ ದಾರ್ಶನಿಕ: ಪ್ರಧಾನಿ ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗೌರವ ನಮನ ಸಲ್ಲಿಸಿದರು. ಈ ವೇಳೆ ನಾರಾಯಣ ಗುರು ಅವರನ್ನು ‘ದೂರದೃಷ್ಟಿಯ ದಾರ್ಶನಿಕ’ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ‘ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುತ್ತೇನೆ. ಅವರ ಜೀವನ, ಕಲೆಗಳು ಆಧ್ಯಾತ್ಮಿಕತೆ ಹಾಗೂ ಸಮಾಜ ಸುಧಾರಣೆಯ ಉತ್ತಮ ಮಿಶ್ರಣವಾಗಿದೆ. ಅವರು ಶಿಕ್ಷಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಿದ್ದರು’ ಎಂದು ಹೇಳಿದ್ದಾರೆ.

ಕೇರಳದಲ್ಲಿ ಜನಿಸಿದ್ದ ಶ್ರೀ ನಾರಾಯಣ ಗುರು ಅವರು 19ನೇ ಶತಮಾನದಲ್ಲಿ ಸಾಮಾಜಿಕ ತಾರತಮ್ಯವನ್ನು ಕೊನೆಗೊಳಿಸಿ, ಜನರಲ್ಲಿ ಒಗ್ಗಟ್ಟನ್ನು ಬೆಳಸಲು ಹೋರಾಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು