ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ: ಮೋದಿ, ರಾಹುಲ್‌ ಗೌರವ ಸಲ್ಲಿಕೆ

Last Updated 19 ನವೆಂಬರ್ 2022, 5:17 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮಾಜಿ ಪ್ರಧಾನಿ,ಏಕೈಕ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರ 105ನೇ ಜನ್ಮದಿನ ಇಂದು (ನ.19). ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಇಂದಿರಾ ಅವರನ್ನು ಸ್ಮರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಟ್ವೀಟ್ ಮಾಡಿದ್ದಾರೆ. ‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ಅವರಿಗೆ ನಮಸ್ಕಾರಗಳು‘ ಎಂದು ಪ್ರಧಾನಿ ನರೇಂದ್ರ ಟ್ವೀಟ್‌ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿರುವ ರಾಹುಲ್‌ ಗಾಂಧಿ ಅವರು ಇಂದು ತಮ್ಮ ಜೊತೆ ಪಾದಯಾತ್ರೆ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಕೇವಲ ಮಹಿಳೆಯರೇ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.

ಸೋನಿಯಾ ಗಾಂಧಿ ಕೂಡ ಇಂದಿರಾ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌, ಕಾಂಗ್ರೆಸ್ ನಾಯಕ ಹೂಡ ಅವರು ಇಂದಿರಾ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ಇಂದಿರಾ ಗಾಂಧಿ ಅವರು 1917ರಲ್ಲಿ ನವೆಂಬರ್ 19ರಂದು ಅಲಹಾಬಾದ್‌ನಲ್ಲಿಜನಿಸಿದರು. ಇಂದಿರಾ ಗಾಂಧಿ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುತ್ರಿ. ತಾಯಿ ಕಮಲಾ ನೆಹರು. ಇಂದಿರಾ ಅವರ ದೆಹಲಿ,ಅಲಹಾಬಾದ್‌, ಪುಣೆ, ಮುಂಬೈ ಹಾಗೂ ಜಿನೀವಾ, ಇಂಗ್ಲೆಂಡ್‌ನಲ್ಲಿ ವ್ಯಾಸಂಗ ಮಾಡಿದರು.

ಭಾರತಕ್ಕೆ ಮರಳಿದ ನಂತರ ಅವರು1942ರಲ್ಲಿ ಫಿರೋಜ್ ಗಾಂಧಿಯನ್ನು ವಿವಾಹವಾದರು. ಅವರಿಗೆ ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಎಂಬ ಇಬ್ಬರು ಗಂಡು ಮಕ್ಕಳಿದ್ದರು. ರಾಜೀವ್‌ ಗಾಂಧಿ ಕೂಡ ಭಾರತ ಪ್ರಧಾನಿಯಾಗಿದ್ದರು.

1984,ಅಕ್ಟೋಬರ್ 31ರಂದು ಇಂದಿರಾ ಗಾಂಧಿ ಅವರನ್ನು ಅವರ ಇಬ್ಬರು ಅಂಗರಕ್ಷಕರು ಗುಂಡಿಕ್ಕಿ ಹತ್ಯೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT