ಭಾನುವಾರ, ಜೂನ್ 13, 2021
29 °C

ಕಿಸಾನ್‌ ಸಮ್ಮಾನ್‌: 8ನೇ ಕಂತಿನ ₹20 ಸಾವಿರ ಕೋಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪಿಎಂ–ಕಿಸಾನ್‌) ಯೋಜನೆಯಡಿ 8ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದ್ದಾರೆ.

ಸುಮಾರು ₹20 ಸಾವಿರ ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದ್ದು, 9.5 ಕೋಟಿಗೂ ಹೆಚ್ಚು ರೈತರಿಗೆ ಇದರ ಪ್ರಯೋಜನ ದೊರೆಯಲಿದೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿ, ಪಶ್ಚಿಮ ಬಂಗಾಳವೂ ಯೋಜನೆಯಲ್ಲಿ ಸೇರಿಕೊಂಡಿದೆ. ಬಂಗಾಳದ 7 ಲಕ್ಷಕ್ಕೂ ಹೆಚ್ಚು ರೈತರಿಗೆ ಯೋಜನೆಯ ಪ್ರಯೋಜನ ದೊರೆಯುತ್ತಿದೆ ಎಂದು ಹೇಳಿದ್ದಾರೆ.

ಓದಿ: 

ಪಿಎಂ–ಕಿಸಾನ್‌ ಯೋಜನೆಯಡಿ ಕೇಂದ್ರ ಸರ್ಕಾರವು 14 ಕೋಟಿ ರೈತರಿಗೆ ವಾರ್ಷಿಕ ₹6,000 ನೀಡುತ್ತಿದೆ. ₹2,000ದಂತೆ ಮೂರು ಹಂತಗಳಲ್ಲಿ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಹಣ ಬಿಡುಗಡೆ ಮಾಡಿದ ಬಳಿಕ ಮೋದಿ ಅವರು ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಮೇಘಾಲಯ, ಜಮ್ಮು–ಕಾಶ್ಮೀರ ಹಾಗೂ ಅಂಡಮಾನ್–ನಿಕೋಬಾರ್‌ ರೈತರ ಜತೆ ಸಂವಾದ ನಡೆಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು