ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಪರಿಸ್ಥಿತಿ, ಲಸಿಕಾ ಅಭಿಯಾನ: ಪ್ರಧಾನಿಯಿಂದ ಪರಿಶೀಲನೆ

Last Updated 15 ಮೇ 2021, 8:10 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌–19ರ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ವಿವಿಧ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ಪರಿಸ್ಥಿತಿ ಬಗ್ಗೆ ಮೋದಿ ಅವರು ನಿಯಮಿತವಾಗಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದ್ದು, ಸೋಂಕಿನ ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 3.26 ಲಕ್ಷ ಕೋವಿಡ್‌–19 ಪ್ರಕರಣಗಳು ದಾಖಲಾಗಿದ್ದು, 3,890 ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಅಂಕಿ ಅಂಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT