ನವದೆಹಲಿ: ವ್ಯಾಪಾರಿ ಸಮುದಾಯದ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಕೂಡ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಪ್ರಮಾಣದ (ಎಂಎಸ್‌ಎಂಇ) ಉದ್ಯಮದ ವ್ಯಾಪ್ತಿಗೆ ತರಲಾಗಿದೆ. ಇದು ವ್ಯಾಪಾರಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯವನ್ನು ಎಂಎಸ್‌ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಘೋಷಿಸಿದ್ದರು. ಇದರಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೆ ಕೂಡ ಆರ್‌ಬಿಐ ಮಾರ್ಗಸೂಚಿ ಅನ್ವಯ ಆದ್ಯತೆಯ ಮೇರೆಗೆ ಸಾಲ ಲಭ್ಯವಾಗಲಿದೆ.

ಓದಿ:ಎಂಎಸ್‌ಎಂಇ ವ್ಯಾಪ್ತಿಗೆ ಸಗಟು, ಚಿಲ್ಲರೆ ವ್ಯಾಪಾರ ವಲಯ

ಈ ಕುರಿತು ಟ್ವೀಟ್ ಮಾಡಿರುವ ಮೋದಿ, ‘ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಕೋಟ್ಯಂತರ ವ್ಯಾಪಾರಿಗಳಿಗೆ ಹಣಕಾಸು ಸೌಲಭ್ಯ ಪಡೆಯುವುದು ಸುಲಭವಾಗಲಿದೆ. ಅನೇಕ ಪ್ರಯೋಜನಗಳನ್ನು ಪಡೆಯುವ ಮೂಲಕ ವ್ಯವಹಾರ ಹೆಚ್ಚಿಸಲು ನೆರವಾಗಲಿದೆ. ವ್ಯಾಪಾರಸ್ಥರ ಸಬಲೀಕರಣಕ್ಕೆ ನಾವು ಬದ್ಧರಾಗಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

ಈ ನಿರ್ಧಾರವು ₹250 ಕೋಟಿ ವರೆಗೆ ವಹಿವಾಟು ಹೊಂದಿರುವ ಚಿಲ್ಲರೆ ವ್ಯಾಪಾರಿಗಳು ಮತ್ತು ಸಗಟು ವ್ಯಾಪಾರಿಗಳಿಗೆ ‘ಆತ್ಮ ನಿರ್ಭರ ಭಾರತ’ ಯೋಜನೆ ಅಡಿ ಘೋಷಿಸಿರುವ ವಿವಿಧ ನೆರವನ್ನು ಪಡೆಯಲು ತಕ್ಷಣದಿಂದಲೇ ನೆರವಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.