ಶುಕ್ರವಾರ, ಜುಲೈ 1, 2022
22 °C

ಕಾನೂನು ಸ್ಥಳೀಯ ಭಾಷೆಯಲ್ಲಿ ಲಭ್ಯವಾಗದಿದ್ದರೆ ನ್ಯಾಯದ ಮೇಲೆ ಪರಿಣಾಮ: ಮೋದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾನೂನು ಸ್ಥಳೀಯ ಭಾಷೆಯಲ್ಲಿ ಲಭ್ಯವಾಗದಿದ್ದರೆ ನ್ಯಾಯದ ಮೇಲೆ ಪರಿಣಾಮವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು.

ಬಡವರಿಗೆ ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ಲಭ್ಯವಾಗುವಂತೆ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ. ಅದೇ ರೀತಿ ಕಾನೂನು ಸಹ ಸ್ಥಳೀಯ ಭಾಷೆಯಲ್ಲಿ ಲಭ್ಯವಾಗಬೇಕಿದೆ. ಇಲ್ಲದಿದ್ದರೆ ನ್ಯಾಯದ ಮೇಲೆ ಪರಿಣಾಮವಾಗಲಿದೆ ಎಂದು ಅವರು ಹೇಳಿದರು.

ನ್ಯಾಯಾಂಗ ವ್ಯವಸ್ಥೆ ಮತ್ತು ನಾಗರಿಕರ ನಡುವಣ ಅಂತರ ಹೋಗಲಾಡಿಸುವುದಕ್ಕಾಗಿ ನ್ಯಾಯಾಲಯಗಳು ಸರಳ ಹಾಗೂ ಸ್ಥಳೀಯ ಭಾಷೆಗಳನ್ನು ಬಳಸಬೇಕು ಎಂದು ಪ್ರಧಾನಿ ಒತ್ತಾಯಿಸಿದರು.

ಡಿಜಿಟಲ್ ಇಂಡಿಯಾ ಉಪಕ್ರಮದ ಭಾಗವಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ತಂತ್ರಜ್ಞಾನವನ್ನು ಏಕೀಕರಣಗೊಳಿಸಲಾಗುತ್ತಿದೆ. ಕಾನೂನಿನ ಪರಿಭಾಷೆಯ ಜೊತೆಗೆ, ಜನಸಾಮಾನ್ಯರಿಗೂ ಸುಲಭವಾಗಿ ಅರ್ಥವಾಗುವ ಸರಳ ಭಾಷೆಯಲ್ಲಿ ಕಾನೂನನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮೋದಿ ಹೇಳಿದರು.

ನ್ಯಾಯಾಂಗ ಕ್ಷೇತ್ರದಲ್ಲಿನ ವಿಳಂಬವನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದರು.

‘2015ರಲ್ಲಿ ಅಪ್ರಸ್ತುತಗೊಂಡಿರುವ 1,800 ಕಾನೂನುಗಳನ್ನು ನಾವು ಗುರುತಿಸಿದ್ದೆವು. ಈ ಪೈಕಿ ಕೇಂದ್ರ ಸರ್ಕಾರವು 1,450 ಕಾನೂನುಗಳನ್ನು ರದ್ದುಗೊಳಿಸಿದೆ. ಆದರೆ, ರಾಜ್ಯಗಳು ಕೇವಲ 75 ಕಾನೂನುಗಳನ್ನು ರದ್ದು ಮಾಡಿವೆ’ ಎಂದು ಪ್ರಧಾನಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು