ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯುಷ್ ಉತ್ಪನ್ನಗಳ ಗುಣಮಟ್ಟ ದೃಢೀಕರಿಸಲು ‘ಆಯುಷ್ ಮಾರ್ಕ್’: ಪ್ರಧಾನಿ ಮೋದಿ

Last Updated 20 ಏಪ್ರಿಲ್ 2022, 9:31 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಆಯುಷ್ ಉತ್ಪನ್ನಗಳ ಗುಣಮಟ್ಟ ದೃಢೀಕರಿಸುವುದಕ್ಕಾಗಿ ಶೀಘ್ರದಲ್ಲೇ ‘ಆಯುಷ್ ಮಾರ್ಕ್’ ಆರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಶೃಂಗಸಭೆಯ ಉದ್ಘಾಟನೆ ಬಳಿಕ ಅವರು ಮಾತನಾಡಿದರು.

ಆಯುಷ್ ಉತ್ಪನ್ನಗಳ ಗುಣಮಟ್ಟಕ್ಕೆ ಕಾರಣವಾಗುವ ಸಾಂಪ್ರದಾಯಿಕ ಔಷಧ ಉತ್ಪನ್ನಗಳನ್ನು ಗುರುತಿಸಿ ದೃಢೀಕರಿಸಲಾಗುವುದು. ಸಾಂಪ್ರದಾಯಿಕ ಚಿಕಿತ್ಸೆಗಳಿಗಾಗಿ ಭಾರತಕ್ಕೆ ಬರುವವರಿಗಾಗಿ ‘ಆಯುಷ್ ವೀಸಾ’ ಕೆಟಗರಿಯನ್ನೂ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಟೆಡ್ರೋಸ್ ಅಧಾನೊಮ್ ಗೆಬ್ರೆಯಸಸ್, ಮಾರಿಷಸ್ ಪ್ರಧಾನಿ ಪ್ರವಿಂದ್‌ ಜಗನ್ನಾಥ್‌ ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT