ಕಷ್ಟದ ಸಮಯದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ: ಪ್ರಧಾನಿ ಮೋದಿ

ಬಹ್ರೇಚ್: ವಿಶ್ವದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಇರುವಾಗ ಭಾರತವು ಬಲಿಷ್ಠವಾಗಿರಬೇಕಿದೆ. ಕಷ್ಟದ ಸಂದರ್ಭದಲ್ಲಿ ಬಲಿಷ್ಠ ನಾಯಕನ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದ ಬಹ್ರೇಚ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ‘ಗರೀಬಿ ಹಟಾವೋ’ ಮತ್ತು ಸಮಾಜವಾದದ ಹೆಸರಿನಲ್ಲಿ ದೇಶವನ್ನು ಲೂಟಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.
ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಅಖಿಲೇಶ್ ಪ್ರಮಾಣವಚನ: ಜೆ.ಪಿ. ನಡ್ಡಾ
ಅಹಮದಾಬಾದ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಪ್ರತಿಪಕ್ಷಗಳು ಮೌನವಾಗಿರವುದೇಕೆ ಎಂದು ಪ್ರಶ್ನಿಸಿದ ಅವರು, ಭಯೋತ್ಪಾದಕರಿಗೆ ಯಾರು ನೆರವು ನೀಡುತ್ತಿದ್ದಾರೆ ಎಂಬುದು ದೇಶದ ಜನರಿಗೆ ಈಗ ಗೊತ್ತಾಗಿದೆ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.