ಭಾನುವಾರ, ನವೆಂಬರ್ 29, 2020
20 °C

ಪ್ರಜಾಪ್ರಭುತ್ವದ ಶಕ್ತಿ ಜಗತ್ತಿಗೆ ತೋರಿಸಿಕೊಟ್ಟ ಬಿಹಾರದ ಜನ: ಪ್ರಧಾನಿ ಮೋದಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

PM Narendra Modi in Bihar election rally - ANI image

ಅರರಿಯಾ (ಬಿಹಾರ): ಕೋವಿಡ್ ಸಾಂಕ್ರಾಮಿಕದ ನಡುವೆ ಚುನಾವಣೆ ನಡೆಸಿದರೂ ಪ್ರಜಾಪ್ರಭುತ್ವದ ಶಕ್ತಿ ಏನೆಂಬುದನ್ನು ಬಿಹಾರದ ಜನ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅರರಿಯ ಜಿಲ್ಲೆಯ ಫೋರ್ಬ್ಸ್‌ಗಂಜ್‌ನಲ್ಲಿ ಚುನಾವಣಾ ಪ್ರಚಾರ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ನಿಮ್ಮ ಮತವು ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿಯೂ ಪ್ರಜಾಪ್ರಭುತ್ವಕ್ಕೆ ಮಹತ್ವ ನೀಡುವ ಸಂದೇಶವನ್ನು ಬಿಹಾರದ ಜನರು ದೇಶಕ್ಕೆ ಮಾತ್ರವಲ್ಲ ಜಗತ್ತಿಗೇ ಸಾರಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

‘ಕೋವಿಡ್ ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಬಿಹಾರದ ಜನರು ಮನೆಯಿಂದ ಹೊರಬಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗಿಯಾಗಿದ್ದಾರೆ. ಪ್ರಜಾಪ್ರಭುತ್ವದ ಮಹಾಶಕ್ತಿಯು ಮತ್ತು ಪ್ರಜಾಪ್ರಭುತ್ವದೆಡೆಗಿನ ಬಿಹಾರದ ಪ್ರತಿಯೊಬ್ಬ ವ್ಯಕ್ತಿಯ ಸಮರ್ಪಣಾ ಮನೋಭಾವವೂ ಇಡೀ ವಿಶ್ವದ ಆತ್ಮವಿಶ್ವಾಸವನ್ನು ಬಿಂಬಿಸಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.

‘ಬಿಹಾರ ಚುನಾವಣೆಯ ಎರಡನೇ ಹಂತದ ಮತದಾನವು ಇಂದು ನಡೆಯುತ್ತಿದೆ. ಮೊದಲ ಹಂತದ ಮತದಾನಕ್ಕೆ ಹೋಲಿಸಿದರೆ ಈ ಬಾರಿ ಬೆಳಿಗ್ಗೆ 10 ಗಂಟೆ ವೇಳೆಗೆ ಹೆಚ್ಚಿನ ಮತದಾನವಾಗಿದೆ’ ಎಂಬುದು ತಿಳಿದುಬಂದಿದೆ ಎಂದೂ ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: 

ಕೋವಿಡ್ ಮಾರ್ಗಸೂಚಿ ಅನುಸರಿಸಿಕೊಂಡು ಚುನಾವಣೆ ನಡೆಸುತ್ತಿರುವ ಚುನಾವಣಾ ಆಯೋಗ, ಆಡಳಿತ ಸಿಬ್ಬಂದಿ ಮತ್ತು ಭದ್ರತಾ ಪಡೆ ಸಿಬ್ಬಂದಿಗೆ ಪ್ರಧಾನಿ ಧನ್ಯವಾದ ಸಮರ್ಪಿಸಿದ್ದಾರೆ.

17 ಜಿಲ್ಲೆಗಳ ವ್ಯಾಪ್ತಿಗೆ ಬರುವ, 94 ವಿಧಾನಸಭಾ ಕ್ಷೇತ್ರಗಳಿಗೆ ಇಂದು (ಮಂಗಳವಾರ) ಮತದಾನ ನಡೆಯುತ್ತಿದ್ದು. 2.85 ಕೋಟಿ ಮತದಾರರಿದ್ದಾರೆ. 1,463 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ತೇಜ್ ಪ್ರತಾಪ್ ಯಾದವ್ ಸೇರಿದಂತೆ ಪ್ರಮುಖ ನಾಯಕರ ಭವಿಷ್ಯ ಇಂದು ಮತಯಂತ್ರ ಸೇರಲಿದೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು