ಸೋಮವಾರ, ಜುಲೈ 26, 2021
25 °C

ಐಐಟಿ ನಿರ್ದೇಶಕರೊಂದಿಗೆ ಇಂದು ಪ್ರಧಾನಿ ಮೋದಿ ಸಂವಾದ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11 ಕ್ಕೆ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ನಿರ್ದೇಶಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ವರ್ಚುವಲ್ ಮೂಲಕ ನಡೆಯಲಿದ್ದು, ನಿನ್ನೆಯಷ್ಟೇ ಶಿಕ್ಷಣ ಸಚಿವರಾಗಿ ಅಧಿಕಾರವಹಿಸಿಕೊಂಡಿರುವ ಧರ್ಮೇಂದ್ರ ಪ್ರಧಾನ್ ಪ್ರಧಾನಿ ಜೊತೆ ಭಾಗಿಯಾಗಲಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಮೋದಿ ಅವರು ಐಐಟಿ ಖರಗಪುರ್ 66 ನೇ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು

ಬುಧವಾರ ಪ್ರಧಾನಿಯವರು ತಮ್ಮ ಮಂತ್ರಿ ಮಂಡಲವನ್ನು ಪುನರ್‌ರಚನೆ ಮಾಡಿದರು. ಇದರಲ್ಲಿ ಹಳೆಯ 12 ಸಚಿವರನ್ನು ಕೈ ಬಿಟ್ಟು ಹೊಸದಾಗಿ 36 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು