ಗುರುವಾರ , ಆಗಸ್ಟ್ 18, 2022
25 °C
12ಕ್ಕೂ ಹೆಚ್ಚು ವಿಶ್ವ ನಾಯಕರ ಜತೆ ಸಭೆ, 15ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗಿ

ಇಂದಿನಿಂದ ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜರ್ಮನಿ ಮತ್ತು ಅರಬ್ ಸಂಯುಕ್ತ ಸಂಸ್ಥಾನ (ಯುಎಇ) ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲದೆ, 15ಕ್ಕೂ ಹೆಚ್ಚು ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಜರ್ಮನಿಯ ಮುನ್‌ಶೆನ್ ನಗರದಲ್ಲಿ ಅನಿವಾಸಿ ಭಾರತೀಯರು ಏರ್ಪಡಿಸಿರುವ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದು ಕೋವಿಡ್ ಅಂತ್ಯದ ಬಳಿಕ ಅತಿದೊಡ್ಡ ಕಾರ್ಯಕ್ರಮವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ. 

ಮೋದಿ ಅವರು ಜೂನ್ 26 ಮತ್ತು 27ರಂದು ಜಿ–7 ರಾಷ್ಟ್ರಗಳ ಶೃಂಗದಲ್ಲಿ ಭಾಗವಹಿಸಲು ಜರ್ಮನಿ ಪ್ರವಾಸ ಕೈಗೊಂಡಿದ್ದಾರೆ. ಜೂನ್ 28ರಂದು ಯುಎಇಗೆ ಪ್ರಯಾಣಿಸಲಿದ್ದು, ಗಲ್ಫ್ ದೇಶದ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಯಾದ್ ಅಲ್ ನಹ್ಯಾನ್ ಅವರ ಸಾವಿಗೆ ಸಂತಾಪ ಸೂಚಿಸಲಿದ್ದಾರೆ. 

ಈ ಎರಡೂ ದೇಶಗಳ 60 ಗಂಟೆಗಳ ಈ ಪ್ರವಾಸದ ವೇಳೆ ಮೋದಿ ಅವರು ಜಿ-7 ಸದಸ್ಯ ರಾಷ್ಟ್ರಗಳ ಜೊತೆಗಷ್ಟೇ ಅಲ್ಲದೆ, ಇತರ ದೇಶಗಳ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು