ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ವಜ್ರಮಹೋತ್ಸವ ಸಮಾರಂಭಕ್ಕೆ ಏ.3ರಂದು ಇಲ್ಲಿನ ವಿಜ್ಞಾನ ಭವನದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಭಾನುವಾರ ತಿಳಿಸಿದೆ.
ಈ ವೇಳೆ ಅಧಿಕಾರಿಗಳ ಅಮೂಲ್ಯ ಸೇವೆಯನ್ನು ಗುರುತಿಸಿ ರಾಷ್ಟ್ರಪತಿಗಳು ನೀಡುವ ಪೊಲೀಸ್ ಪದಕ ಮತ್ತು ಅತ್ಯುತ್ತಮ ತನಿಖಾಧಿಕಾರಿಗಳಿಗೆ ನೀಡುವ ಚಿನ್ನದ ಪದಕವನ್ನು ಪ್ರದಾನ ಮಾಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ವಜ್ರಮಹೋತ್ಸವದ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ತನಿಖಾ ಸಂಸ್ಥೆಯ ಟ್ವಿಟರ್ ಖಾತೆಗೂ ಚಾಲನೆ ನೀಡಲಿದ್ದಾರೆ ಎಂದು ಹೇಳಿದೆ.
ಹಾಗೆಯೇ, ಶಿಲ್ಲಾಂಗ್, ಪುಣೆ ಮತ್ತು ನಾಗ್ಪುರದಲ್ಲಿ ನಿರ್ಮಿಸಲಾಗಿರುವ ನೂತನ ಸಿಬಿಐ ಕಟ್ಟಡವನ್ನೂ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದೆ.
1963 ಏಪ್ರಿಲ್ 1ರಂದು ಸಿಬಿಐ ಸ್ಥಾಪನೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.