ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

Last Updated 20 ಡಿಸೆಂಬರ್ 2020, 8:15 IST
ಅಕ್ಷರ ಗಾತ್ರ

ನವದಹೆಲಿ: ಡಿಸೆಂಬರ್ 25 ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ,ಉತ್ತರ ಪ್ರದೇಶರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿದೆ.

ಶನಿವಾರ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ ಪಕ್ಷವು, ಪೂರ್ವ ಸಿದ್ಧತೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಉತ್ತರ ಪ್ರದೇಶದಲ್ಲಿ 2,500ಕ್ಕೂ ಹೆಚ್ಚು ಸ್ಥಳಗಳಲ್ಲಿ 'ಕಿಸಾನ್ ಸಂವಾದ' ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ.

ಈ ಸಂಬಂಧ ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್, ರಾಜ್ಯದ ವಿವಿಧ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿಗೆ ವರ್ಚ್ಯುವಲ್ ಸಭೆ ನಡೆಸಿದರು.

ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರವು ಬಡವರು ಮತ್ತು ರೈತರಿಗೆ ಸಮರ್ಪಿತವಾಗಿದೆ ಎಂದು ಹೇಳಿದರು.

ನೂತನ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸುಳ್ಳು ಹೇಳುತ್ತಿದೆ ಎಂದವರು ಆರೋಪಿಸಿದರು. ಅಲ್ಲದೆ ಮೋದಿ ಸರ್ಕಾರವು ಮಾಡಿರುವ ಕ್ಷೇಮಾಭಿವೃದ್ಧಿಯನ್ನು ಈ ಹಿಂದೆಯೇ ಮಾಡಿದ್ದರೆ, ರೈತರ ಸ್ಥಿತಿ ಉತ್ತಮವಾಗಿರುತ್ತಿತ್ತು ಎಂದು ಹೇಳಿದರು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ, ಹರಿಯಾಣ ಗಡಿಯಲ್ಲಿ ರೈತ ಸಂಘಟನೆಗಳನ್ನು ಪ್ರತಿಭಟನೆಯನ್ನು ಮುಂದುವರಿಸಿದೆ. ಈ ಮಧ್ಯೆ ನೂತನ ಕಾಯ್ದೆ ಕುರಿತು ಕೇಂದ್ರ ಸರ್ಕಾರ ರೈತರ ಮನವರಿಕೆ ಮಾಡುವ ಪ್ರಯತ್ನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT