ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಇದೇ 16ರಂದು ದೇಶದಲ್ಲಿ ಕೋವಿಡ್–19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ.

‘ದೇಶದ ವಿವಿಧೆಡೆ ಮೊದಲ ದಿನ ಲಸಿಕೆ ಪಡೆಯಲಿರುವ ಕೆಲ ಆರೋಗ್ಯ ಕಾರ್ಯಕರ್ತರ ಜೊತೆಗೆ ಮೋದಿ ಅವರು ವಿಡಿಯೊ ಲಿಂಕ್ ಮೂಲಕ ಸಂವಾದ ನಡೆಸುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.

‘ಮೋದಿ ಅವರು ಇದೇ ವೇಳೆ ‘ಕೋವಿನ್ ಆ್ಯಪ್’ ಅನ್ನೂ (ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್‌ವರ್ಕ್) ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಈ ಆ್ಯಪ್, ಲಸಿಕೆ ಕುರಿತ ಮಾಹಿತಿ, ನೋಂದಣಿ, ವಿತರಣೆ ಹಾಗೂ ಟ್ರ್ಯಾಕಿಂಗ್ ಸಹಿತ ವಿವಿಧ ಪ್ರಯೋಜನ ಒದಗಿಸಲಿದೆ’ ಎಂದೂ ಮೂಲಗಳು ಹೇಳಿವೆ.

’ಬಹು ನಿರೀಕ್ಷಿತ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮವನ್ನು ಇದೇ 16ರಂದು ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದು ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನವಾಗಲಿದೆ’ ಎಂದು ಸಚಿವಾಲಯ ತಿಳಿಸಿದೆ.

‘ದೇಶದಲ್ಲಿ ಒಟ್ಟು 2,934 ಕೇಂದ್ರಗಳನ್ನು ತೆರೆಯಲಾಗಿದ್ದು, ಇವುಗಳಲ್ಲಿ ಮೊದಲ ದಿನ ಸುಮಾರು 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಡೋಸ್ ನೀಡಲಾಗುತ್ತದೆ. ಒಂದು ಕೇಂದ್ರದಲ್ಲಿ ಗರಿಷ್ಠ 100 ಮಂದಿಗೆ ಲಸಿಕೆ ಚುಚ್ಚಲಾಗುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈಗಾಗಲೇ ನೋಂದಣಿ ಮಾಡಿಕೊಂಡಿರುವ ವೈದ್ಯರು, ಶುಶ್ರೂಷಕಿಯರು, ಸಫಾಯಿ ಕರ್ಮಚಾರಿಗಳು ಹಾಗೂ ಆಂಬುಲೆನ್ಸ್ ಚಾಲಕರು ಮೊದಲ ದಿನ ಲಸಿಕೆಗೆ ಒಳಪಡಲಿದ್ದಾರೆ.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ ಒಟ್ಟು 1.65 ಕೋಟಿ ಡೋಸ್‌ಗಳನ್ನು ಈಗಾಗಲೇ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗಿದೆ.

‘ರಾಜ್ಯಗಳು ಒದಗಿಸಿದ್ದ ದತ್ತಾಂಶಗಳ ಆಧಾರದಲ್ಲೇ ಮೊದಲ ಹಂತದಲ್ಲಿ ಅವರಿಗೆ ಅಗತ್ಯವಿರುವಷ್ಟು ಕೋವಿಡ್ ಲಸಿಕೆಯ ಡೋಸ್‌ಗಳನ್ನು ರವಾನಿಸಲಾಗಿದೆ. ಲಸಿಕೆ ವಿತರಣೆ ವಿಚಾರದಲ್ಲಿ ನಾವು ಯಾವುದೇ ರಾಜ್ಯಕ್ಕೂ ಅನ್ಯಾಯ ಮಾಡಿಲ್ಲ. ತಾರತಮ್ಯವನ್ನೂ ಮಾಡಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಗಳ ಬೇಡಿಕೆಗೆ ಅನುಸಾರವಾಗಿ ಲಸಿಕೆಯ ಡೋಸ್‌ಗಳನ್ನು ಪೂರೈಸಲಾಗುತ್ತದೆ’ ಎಂದು ಸಚಿವಾಲಯ ಹೇಳಿದೆ.

2,934 ಲಸಿಕಾ ಕೇಂದ್ರಗಳ ಪೈಕಿ ಆಯ್ದ ಕೆಲ ಕೇಂದ್ರಗಳಲ್ಲಿ ಪ್ರಧಾನಿಯವರೊಂದಿಗೆ ಸಂವಾದ ನಡೆಸಲು ಅಗತ್ಯವಿರುವ ವ್ಯವಸ್ಥೆ ಮಾಡಲಾಗಿದೆ. ಲಸಿಕೆಯ ಡೋಸ್ ಪಡೆದವರು ಲಿಂಕ್ ಮೂಲಕ ಮೋದಿ ಹಾಗೂ ಇತರ ಅಧಿಕಾರಿಗಳೊಂದಿಗೆ ಸಮಾಲೋಚಿಸಬಹುದು ಎಂದೂ ಹೇಳಲಾಗಿದೆ.

‘ಮೋದಿ ಅವರೊಂದಿಗೆ ದ್ವಿಮುಖ ಸಂವಹನ ನಡೆಸಲು ಅಗತ್ಯವಿರುವ ವ್ಯವಸ್ಥೆಯನ್ನು ನಾವು ಮಾಡಿಕೊಂಡಿದ್ದೇವೆ’ ಎಂದು ನವದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.