ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಗಳಲ್ಲಿರುವ ರಾಯಭಾರಿಗಳ ಜತೆ ಇಂದು ಪ್ರಧಾನಿ ಮೋದಿ ಸಭೆ

Last Updated 6 ಆಗಸ್ಟ್ 2021, 2:57 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಗಳಲ್ಲಿರುವ ಭಾರತೀಯ ರಾಯಭಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ವರ್ಚುವಲ್ ಸಭೆ ನಡೆಸಲಿದ್ದಾರೆ. ಜತೆಗೆ, ವ್ಯಾಪಾರ ಮತ್ತು ವಾಣಿಜ್ಯೋದ್ಯಮ ಬಂಡವಾಳಗಾರರ ಜತೆಗೂ ಸಭೆ ನಡೆಸಲಿದ್ದಾರೆ.

ಪ್ರಧಾನಿಯವರ ‘ಲೋಕಲ್ ಗೋಸ್ ಗ್ಲೋಬಲ್ – ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್‌’ ಕರೆಯ ಮೇರೆಗೆ ಈ ಸಭೆ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

ರಫ್ತು, ಉದ್ಯೋಗ ಸೃಷ್ಟಿ, ಎಂಎಸ್‌ಎಂಇಗಳಲ್ಲಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ ಮತ್ತು ಒಟ್ಟಾರೆ ಆರ್ಥಿಕತೆಯ ಬಗ್ಗೆ ಪ್ರಧಾನಿಯವರು ಸಭೆಯಲ್ಲಿ ಚರ್ಚೆ ನಡೆಸುವ ನಿರೀಕ್ಷೆ ಇದೆ. ರಫ್ತು ಮತ್ತು ಜಾಗತಿಕ ವ್ಯಾಪಾರದಲ್ಲಿ ಭಾರತದ ಪಾಲನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚರ್ಚಿಸುವುದು ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಕೇಂದ್ರ ಸಚಿವರಾದ ಪೀಯೂಷ್ ಗೋಯಲ್, ಎಸ್‌.ಜೈಶಂಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT