ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿತ್ರಿಬಾಯಿ ಫುಲೆ 174ನೇ ಜಯಂತಿ: ಪ್ರಧಾನಿ ಮೋದಿ ಗೌರವ ನಮನ

Last Updated 3 ಜನವರಿ 2023, 9:06 IST
ಅಕ್ಷರ ಗಾತ್ರ

ನವದೆಹಲಿ; ಮಹಿಳಾ ಶಿಕ್ಷಣದ ಪ್ರವರ್ತಕಿ ಸಾವಿತ್ರಿಬಾಯಿ ಫುಲೆ ಅವರ 174 ನೇ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಟ್ವೀಟ್ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ.

‘ಸಾವಿತ್ರಿಬಾಯಿ ಫುಲೆ ಅವರು ನಮ್ಮ ನಾರಿ ಶಕ್ತಿಯ ಅದಮ್ಯ ಚೈತನ್ಯ. ಅವರು ಸ್ಫೂರ್ತಿದಾಯಕರಾಗಿದ್ದಾರೆ, ಫುಲೆ ಮಹಿಳೆಯರ ಶಿಕ್ಷಣ ಮತ್ತು ಸಬಲೀಕರಣಕ್ಕಾಗಿ ತಮ್ಮ ಜೀವನವನ್ನೇ ಮೀಸಲಿಟ್ಟಿದ್ದರು. ಸಮಾಜ ಸುಧಾರಣೆ ಮತ್ತು ಸಮುದಾಯ ಸೇವೆಯತ್ತ ಅವರ ಗಮನ ಹೆಚ್ಚಿನದಾಗಿತ್ತು ಎಂದು ಸ್ಮರಿಸಿದ್ದಾರೆ.

ಇದೇ ವೇಳೆ 18ನೇ ಶತಮಾನದಲ್ಲಿ ವಸಾಹತುಶಾಹಿ ಸಾಮ್ರಾಜ್ಯದ ವಿರುದ್ಧ ಹೋರಾಡಿದ ತಮಿಳುನಾಡಿನ ವೇಲು ನಾಚಿಯಾರ್ ಜನ್ಮದಿನಕ್ಕೆ ಶುಭ ಕೋರಿದ್ದಾರೆ.

‘ವೇಲು ನಾಚಿಯಾರ್ ಅವರ ಧೈರ್ಯವು ಮುಂದಿನ ಪೀಳಿಗೆಗೆ ಪ್ರೇರಣೆ. ಜನರಿಗೆ ನ್ಯಾಯವನ್ನು ಒದಗಿಸಿ ಕೊಡುವಲ್ಲಿ ಮುಂಚೂಣಿಯಲ್ಲಿದ್ದರು. ವಸಾಹತುಶಾಹಿಯನ್ನು ತೀವ್ರವಾಗಿ ವಿರೋಧಿಸಿದ ಅವರು, ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT