ಭಾನುವಾರ, ಜೂನ್ 26, 2022
25 °C
262 ಕಿ.ಮೀ, ಅಂದಾಜು ವೆಚ್ಚ ₹ 14,870 ಕೋಟಿ

ಬೆಂಗಳೂರು–ಚೆನ್ನೈ ಹೆದ್ದಾರಿಗೆ ಪ್ರಧಾನಿಯಿಂದ ಶಂಕುಸ್ಥಾಪನೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಬೆಂಗಳೂರು–ಚೆನ್ನೈ ನಡುವೆ ಅಂದಾಜು ₹ 14,870 ಕೋಟಿ ವೆಚ್ಚದಲ್ಲಿ 262 ಕಿ.ಮೀ ನೂತನ ಹೆದ್ದಾರಿ ಅಭಿವೃದ್ಧಿ ಪಡಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಲ್ಲಿ ಚಾಲನೆ ನೀಡಿದರು.

ಉದ್ದೇಶಿತ ಹೆದ್ದಾರಿ ಅಭಿವೃದ್ಧಿಯಿಂದ ಉಭಯ ನಗರಗಳ ನಡುವಿನ ಪ್ರಯಾಣದ ಅವಧಿ ಸುಮಾರು 2–3 ಗಂಟೆ ಕಡಿಮೆಯಾಗಲಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ಮೂಲಕ ನೂತನ  ಹೆದ್ದಾರಿ ಹಾದುಹೋಗಲಿದೆ.

ಇದು ಸೇರಿದಂತೆ ₹ 28,000 ಕೋಟಿ ಅಂದಾಜು ವೆಚ್ಚದ ಆರು ವಿವಿಧ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.

ಉದ್ಘಾಟನೆ: ಅಲ್ಲದೆ, ಸುಮಾರು 2,960 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಐದು ವಿವಿಧ ಯೋಜನೆಗಳನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ‘ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ನೆರವು ನೀಡಬೇಕು. ರಾಜ್ಯದಲ್ಲಿ ಅಭಿವೃದ್ಧಿ ಆರ್ಥಿಕ ಮಾನದಂಡವನ್ನಷ್ಟೇ ಒಳಗೊಂಡಿಲ್ಲ, ಸಮಗ್ರ ಅಭಿವೃದ್ಧಿಗೆ ಒತ್ತುನೀಡುವ ದ್ರಾವಿಡ ಮಾದರಿಯದ್ದಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು