ಭಾನುವಾರ, ಜನವರಿ 24, 2021
19 °C

ಕೋವಿಡ್ ಲಸಿಕೆ: ಪುಣೆಯ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾಗೆ ಪ್ರಧಾನಿ ಭೇಟಿ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪುಣೆ: ಇಲ್ಲಿನ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಗೆ ಶನಿವಾರ ಭೇಟಿ ನೀಡಿರುವ ಪ್ರಧಾನಿ ಮೋದಿ ಕೊರೊನಾ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸಲಾಗುತ್ತಿರುವ ಕೋವಿಡ್‌ ಲಸಿಕೆಯ ಪ್ರಗತಿ ಪರಿಶೀಲನೆ ಮಾಡಿದ್ದಾರೆ.

ಈ ವೇಳೆ ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.

ಈ ಬಗ್ಗೆ ಶನಿವಾರ ಸಂಜೆ ಟ್ವೀಟ್‌ ಮಾಡಿರುವ ಅವರು, 'ಸೆರಂ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯಾ ಸಂಸ್ಥೆಯಲ್ಲಿ ಕೋವಿಡ್‌ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿರುವ ತಂಡದೊಂದಿಗೆ ಸಂವಾದ ನಡೆಸಿದ್ದೇನೆ. ಲಸಿಕೆ ತಯಾರಿಕೆಯಲ್ಲಿ ಈ ವರೆಗೂ ಸಾಧಿಸಿರುವ ಪ್ರಗತಿಯ ಬಗ್ಗೆ ಅವರು ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಲಸಿಕೆ ತಯಾರಿಕೆಯ ವೇಗವನ್ನು ಹೆಚ್ಚಿಸಲು ಯಾವ ರೀತಿಯಲ್ಲಿ ಯೋಜನೆ ರೂಪಿಸಿದ್ದಾರೆ ಎಂಬುದರ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಅವರ ಉತ್ಪದನಾ ಸಾಮರ್ಥ್ಯದ ಬಗ್ಗೆಯೂ ತಿಳಿದುಕೊಂಡೆ' ಎಂದು ಹೇಳಿದ್ದಾರೆ.

ಪುಣೆಗೆ ತೆರಳುವುದಕ್ಕೂ ಮುನ್ನ ಅಹಮದಾಬಾದ್‌ನ ಜೈಡಸ್‌ ಕ್ಯಾಡಿಲಾ ಸಂಸ್ಥೆಯ ಉತ್ಪಾದನಾ ಘಟಕ ಮತ್ತು ಹೈದರಾಬಾದ್ ಭಾರತ್ ಬಯೋಟೆಕ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.

ಇದನ್ನೂ ಓದಿ...

ಕೋವಿಡ್ ಲಸಿಕೆ: ಭಾರತ್ ಬಯೋಟೆಕ್ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ

ಕೊರೊನಾ ಸೋಂಕು ವಿರುದ್ಧದ ಲಸಿಕೆಯ ಬಿಡುಗಡೆಗೆ ಮುನ್ನ ಅದರ ಉತ್ಪಾದನೆ ಮತ್ತು ವಿತರಣಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆಯುವ ಕ್ರಮವಾಗಿ ಪ್ರಧಾನಿ ಮೋದಿ ಈ ಭೇಟಿ ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು