ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗನ್ ಕುರಿತು ನಾಳೆ ಜಿ–20 ಸಭೆ: ವರ್ಚುವಲ್ ಆಗಿ ಭಾಗಿಯಾಗಲಿರುವ ಪ್ರಧಾನಿ ಮೋದಿ

Last Updated 11 ಅಕ್ಟೋಬರ್ 2021, 9:58 IST
ಅಕ್ಷರ ಗಾತ್ರ

ನವದೆಹಲಿ: ಆಫ್ಗಾನಿಸ್ತಾನದ ವಿಚಾರವಾಗಿ ಮಂಗಳವಾರ ನಡೆಯುತ್ತಿರುವ ಜಿ–20 ಪ್ರಮುಖ ಮುಖಂಡರ ಶೃಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಆಗಿ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಇಎ) ಸೋಮವಾರ ತಿಳಿಸಿದೆ.

ಇಟಲಿ ಸರ್ಕಾರದಿಂದ ಬಂದಿರುವ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಜಿ–20 ಸಭೆಯಲ್ಲಿ ಭಾಗಿಯಾಗುತ್ತಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಈ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್‌ ಆಡಳಿತದ ಹಿಡಿತಕ್ಕೆ ಸಿಲುಕಿದ ಆಫ್ಗಾನಿಸ್ತಾನಕ್ಕೆ ಅಗತ್ಯವಿರುವ ಮೂಲಭೂತ ಸೇವೆಗಳು, ಸೌಲಭ್ಯಗಳು ಹಾಗೂ ಜೀವನೋಪಾಲಯಕ್ಕೆ ಅಗತ್ಯ ನೆರವಿನ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಭಯೋತ್ಪಾದನೆಯ ಕುರಿತು ಹೋರಾಟ, ಭದ್ರತೆ, ವಲಸೆ ಹಾಗೂ ಮಾನವ ಹಕ್ಕುಗಳ ಕುರಿತೂ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT