ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಅದ್ಧೂರಿ ದೀಪೋತ್ಸವಕ್ಕೆ ಸಾಕ್ಷಿಯಾಗಲಿರುವ ಪ್ರಧಾನಿ ಮೋದಿ

Last Updated 21 ಅಕ್ಟೋಬರ್ 2022, 5:53 IST
ಅಕ್ಷರ ಗಾತ್ರ

ಅಯೋಧ್ಯೆ (ಉತ್ತರ ಪ್ರದೇಶ): ದೀಪಾವಳಿ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗಲಿದ್ದಾರೆ.

ದೀಪಾವಳಿಯ ಮುನ್ನಾದಿನ ಅಕ್ಟೋಬರ್ 23ರಂದು ಪ್ರಧಾನಿ ಮೋದಿಯವರು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಜನ್ಮಭೂಮಿಗೆ (ರಾಮ ಮಂದಿರ) ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿಗಳ ಕಚೇರಿ ಮಾಹಿತಿ ನೀಡಿದೆ.

ಈ ಬಾರಿಯ ದೀಪೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿರುವ ಉತ್ತರ ಪ್ರದೇಶ ಸರ್ಕಾರ, ಭರದ ಸಿದ್ಧತೆ ನಡೆಸಿದೆ.

ಗಿನ್ನಿಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ 12 ಲಕ್ಷಕ್ಕೂ ಹೆಚ್ಚು ದೀಪಗಳನ್ನು ಬೆಳಗಿಸುವ ಗುರಿಯನ್ನು ಹೊಂದಲಾಗಿದೆ. ಈ ಉದ್ದೇಶದಿಂದ ಅಯೋಧ್ಯೆ, ಲಖನೌ, ಗೊಂಡಾ ಮತ್ತಿತರ ಜಿಲ್ಲೆಗಳಿಂದ ಮಣ್ಣಿನ ದೀಪಗಳನ್ನು ತರಿಸಲಾಗುತ್ತಿದೆ

ಈಗಾಗಲೇ ದೀಪಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಬಾರಿ ದೀಪೋತ್ಸವವನ್ನು ಕಳೆದ ಐದು ವರ್ಷಗಳಿಗಿಂತ ಭಿನ್ನವಾಗಿ ಆಚರಿಸಲಾಗುತ್ತಿದೆ. ಈ ವರ್ಷ 30 ನಿಮಿಷಕ್ಕೂ ಹೆಚ್ಚು ಕಾಲ ದೀಪಗಳು ಉರಿಯಲಿವೆ. ಈಗ ಜನರು ದೀಪಗಳು ಹೆಚ್ಚು ಕಾಲ ಉರಿಯುವುದನ್ನು ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಕಳೆದ ವರ್ಷ ದೀಪೋತ್ಸವದಲ್ಲಿ 9 ಲಕ್ಷ ದೀಪಗಳನ್ನು ಬೆಳಗಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT