ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಸುಮಾರು ಎರಡು ವರ್ಷಗಳ ಬಳಿಕ, ಅಲ್ಲಿನರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯು ಆರಂಭವಾಗಿದೆ.

ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಮೋದಿ ಅಧಿಕೃತ ನಿವಾಸದಲ್ಲಿ ಸಭೆ ಆರಂಭವಾಗಿದ್ದು, ಜಮ್ಮು ಕಾಶ್ಮೀರದಪ್ರಮುಖ 14 ರಾಜಕೀಯ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.ಅದರಲ್ಲಿಕಾಂಗ್ರೆಸ್ ಪಕ್ಷದ ಗುಲಾಂ ನಬಿ ಆಜಾದ್, ತಾರಾ ಚಾಂದ್, ಜಿಎ ಮಿರ್, ನ್ಯಾಷನಲ್ ಕಾನ್ಫರೆನ್ಸ್‌ನ ಡಾ.ಫಾರೂಕ್ ಅಬ್ದುಲ್ಲಾ, ಓಮರ್ ಅಬ್ದುಲ್ಲಾ, ಪಿಡಿಪಿಯ ಮೆಹಬೂಬಾ ಮುಫ್ತಿ, ಜಮ್ಮು ಕಾಶ್ಮೀರ ಅಪ್ನಿ ಪಾರ್ಟಿಯ ಅಲ್ತಾಫ್ ಬುಖಾರಿ, ಬಿಜೆಪಿಯ ರವೀಂದ್ರ ರೈನಾ, ನಿರ್ಮಲಾ ಸಿಂಗ್, ಕವಿಂದರ್ ಗುಪ್ತಾ, ಸಿಪಿಐ (ಎಂ) ನ ಎಂ.ವೈ. ತಾರಿಗಾಮಿ, ನ್ಯಾಷನಲ್ ಪ್ಯಾಂಥೆರ್ಸ್ ಪಕ್ಷದ ಪ್ರೊ.ಭೀಮ್ ಸಿಂಗ್ ಮತ್ತು ಪೀಪಲ್ಸ್ ಕಾನ್ಫರೆನ್ಸ್‌ನ ಸಾಜದ್ ಗನಿ ಲೋನ್ ಪ್ರಮುಖರು.

ಕೇಂದ್ರ ಗೃಹಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರಅಜಿತ್ ಡೊಭಾಲ್, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗೌವರ್ನರ್ ಮನೋಜ್ ಸಿನ್ಹಾ ಹಾಗೂಗೃಹ ಕಾರ್ಯದರ್ಶಿಯೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವುದು, ರದ್ದುಗೊಳಿಸಲಾಗಿರುವವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವುದು ಹಾಗೂ ವಿಧಾನಸಭೆ ಚುನಾವಣೆ ನಡೆಸುವ ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.