ಜಲ್ನಾ (ಮಹಾರಾಷ್ಟ್ರ): ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವಿನ ಗಡಿ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಜಲ್ನಾ ಜಿಲ್ಲೆಯ ಸಂತ ರಾಮದಾಸ್ ಕಾಲೇಜಿನಲ್ಲಿ ನಡೆದ 42ನೇ ಮರಾಠವಾಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ಭಾನುವಾರ ನಾಗ್ಪುರ– ಮುಂಬೈ ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಬರುತ್ತಿದ್ದಾರೆ. ಅವರನ್ನು ನಾವು ಸ್ವಾಗತಿಸುತ್ತೇವೆ. ಭೇಟಿ ವೇಳೆ ಅವರು ಕರ್ನಾಟಕ– ಮಹಾರಾಷ್ಟ್ರ ನಡುವಿನ ಗಡಿಯ ಸಮಸ್ಯೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದರು.

‘ಮಹಾರಾಷ್ಟ್ರದ ಕೆಲವು ಹಳ್ಳಿಗಳ ಮೇಲೆ ಹಕ್ಕು ಸಾಧಿಸುತ್ತಿರುವ ಕರ್ನಾಟಕ ಮುಖ್ಯಮಂತ್ರಿಯ ಕುರಿತೂ ಪ್ರಧಾನಿ ಅವರು ಮಾತನಾಡಬೇಕು’ ಎಂದು ಹೇಳಿದರು.

ನ್ಯಾಯಮೂರ್ತಿಗಳ ನೇಮಕಕ್ಕಾಗಿ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಠಾಕ್ರೆ, ಬಿಜೆಪಿಯು ನ್ಯಾಯಾಂಗ ವ್ಯವಸ್ಥೆಯ ಮೇಲೆ ಒತ್ತಡ ಹೇರುತ್ತಿದೆ ಹಾಗೂ ಅದನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಯತ್ನಿಸುತ್ತಿದೆ ಎಂದೂ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.