ಮಂಗಳವಾರ, ಮಾರ್ಚ್ 2, 2021
19 °C
ಆಸ್ಪತ್ರೆಗೆ ಭೇಟಿ ನೀಡಿದ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು

ಸಚಿವ ನಾಯಕ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್‌)ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರ ಆರೋಗ್ಯವನ್ನು ವಿಚಾರಿಸಿದರು.

ಸಚಿವ ನಾಯಕ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಿಯವರು, ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ತಿಳಿಸಿದ್ದಾರೆ ಎಂದು ನಾಯಕ್ ಅವರ ವಿಶೇಷ ಅಧಿಕಾರಿ ಸೂರಜ್ ನಾಯಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ಧಾರೆ.

ಮೋದಿಯವರು ಕರೆ ಮಾಡುವ ಸ್ವಲ್ಪ ಹೊತ್ತಿಗೆ ಮುಂಚೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಆಸ್ಪತ್ರೆಗೆ ಭೇಟಿ ನೀಡಿ ನಾಯಕ್ ಅವರ ಆರೋಗ್ಯ ವಿಚಾರಿಸಿದ್ದರು.

ಇತ್ತೀಚೆಗೆ ಕಾರವಾರ ಸಮೀಪದ ಅಂಕೋಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಚಿವರಿಗೆ ಸೋಮವಾರ ಇಲ್ಲಿನ ಜಿಎಂಸಿಎಚ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದರು. ಇತ್ತೀಚೆಗಷ್ಟೇ ನವದೆಹಲಿಯ ಏಮ್ಸ್ ವೈದ್ಯರ ತಂಡ, ಗೋವಾ ಆಸ್ಪತ್ರೆಗೆ ಭೇಟಿ ನೀಡಿ, ನಾಯಕ್ ಅವರ ಆರೋಗ್ಯವನ್ನು ಪರಿಶೀಲಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು