ಶುಕ್ರವಾರ, ಮೇ 20, 2022
19 °C
ಓಮೈಕ್ರಾನ್: ಮಾರ್ಗಸೂಚಿಗಳ ಪಾಲನೆ ಅಗತ್ಯ

ಕೋವಿಡ್‌ ವಿರುದ್ಧದ ಹೋರಾಟ ಇನ್ನೂ ಕೊನೆಗೊಂಡಿಲ್ಲ: ಪ್ರಧಾನಿ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ವೈರಸ್‌ನ ರೂಪಾಂತರಿ ಓಮೈಕ್ರಾನ್ ತಳಿಯ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಕೋವಿಡ್‌ ಪಿಡುಗಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗುರುವಾರ ಹೇಳಿದರು.

ದೇಶದಲ್ಲಿನ ಕೋವಿಡ್‌–19 ಪಿಡುಗಿನ ಸ್ಥಿತಿ ಪರಿಶೀಲಿಸಲು ಹಾಗೂ ಓಮೈಕ್ರಾನ್‌ ತಳಿಯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆಸಿದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್‌ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಾಗೂ ಲಸಿಕೆ ನೀಡಿಕೆ ಪ್ರಮಾಣ ಕಡಿಮೆ ಇರುವ ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

‘ಓಮೈಕ್ರಾನ್‌ ತಳಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ನಾವು ಹೆಚ್ಚು ಜಾಗೃತರಾಗಬೇಕು ಹಾಗೂ ಎಚ್ಚರದಿಂದ ಇರಬೇಕು’ ಎಂದೂ ಅವರು ಹೇಳಿದರು.

ಔಷಧಗಳ ಲಭ್ಯತೆ, ಆಮ್ಲಜನಕ ಸಿಲಿಂಡರ್‌ಗಳು, ವೆಂಟಿಲೇಟರ್‌ಗಳ ದಾಸ್ತಾನು, ಮಾನವ ಸಂಪನ್ಮೂಲ, ಹಾಸಿಗೆಗಳು ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು