ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ಜನಾಂಗದ ದುಸ್ಥಿತಿಗೆ ಹಿಂದಿನ ಕಾಂಗ್ರೆಸ್ ಸರ್ಕಾರವನ್ನು ದೂರಿದ ಮೋದಿ

Last Updated 15 ನವೆಂಬರ್ 2021, 13:20 IST
ಅಕ್ಷರ ಗಾತ್ರ

ಭೋಪಾಲ: ದೇಶದಲ್ಲಿ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಬುಡಕಟ್ಟು ಜನಾಂಗದ ಕಲ್ಯಾಣವನ್ನು ನಿರ್ಲಕ್ಷಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೂರಿದ್ದಾರೆ.

ಕಾಂಗ್ರೆಸ್ ಆಡಳಿತದಲ್ಲಿ ಕಡೆಗಣಿಸಿರುವ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಬುಡಕಟ್ಟು ಜನಾಂಗದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಶತಮಾನೋತ್ಸವವನ್ನು (ನ.15) 'ಜನ್‌ಜಾತೀಯ ಗೌರವ ದಿವಸ' (ಬುಡಕಟ್ಟು ದಿವಸ) ಆಗಿ ಆಚರಿಸಲಾಗುತ್ತಿದೆ.

'ಅಂಬೇಡ್ಕರ್ ಜಯಂತಿ, ಗಾಂಧಿ ಜಯಂತಿ ಅಂತೆಯೇ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಶತಮಾನೋತ್ಸವವನ್ನು ವರ್ಷಂಪ್ರತಿ ಆಚರಿಸಲಾಗುತ್ತದೆ. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಹಿಂದುಳಿದಿದ್ದ 100 ಜಿಲ್ಲೆಗಳಲ್ಲಿ ಈಗ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ' ಎಂದು ಹೇಳಿದರು.

ಮಧ್ಯಪ್ರದೇಶದಲ್ಲಿ 'ರೇಷನ್ ಆಪ್ಕೆ ಗ್ರಾಮ್' ಯೋಜನೆ ಸೇರಿದಂತೆ ಜನ್‌ಜಾತೀಯ ಸಮುದಾಯದ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT