ಶನಿವಾರ, ಜುಲೈ 24, 2021
20 °C

ಯೋಗದಿನ: ಪ್ರಧಾನಿ ಮೋದಿ ಮಾತು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 21ರಂದು (ಸೋಮವಾರ) ಮುಂಜಾನೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

‘ನಾಳೆ ಜೂನ್ 21, ಏಳನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಿದ್ದೇವೆ. ‘ಆರೋಗ್ಯಕ್ಕಾಗಿ ಯೋಗ’ ಎನ್ನುವುದು ಈ ಬಾರಿಯ ಸಂದೇಶವಾಗಿದ್ದು, ಯೋಗಾಭ್ಯಾಸವು ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕೇಂದ್ರೀಕರಿಸುತ್ತದೆ’ ಎಂದು ಮೋದಿ ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

‘ಅಂದು ಮುಂಜಾನೆ 6.30ಕ್ಕೆ ನಾನು ಯೋಗ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುವೆ’ ಎಂದೂ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕೋವಿಡ್‌–19 ಸಾಂಕ್ರಾಮಿಕ ರೋಗ ಹಾಗೂ ಸಭೆ ಸೇರುವುದರ ಮೇಲಿನ ನಿರ್ಬಂಧಗಳ ಕಾರಣ, ಯೋಗ ದಿನ ಪ್ರಮುಖ ಕಾರ್ಯಕ್ರಮಗಳನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುವುದು. ಇದರಲ್ಲಿ ಪ್ರಧಾನಿ ಅವರ ಭಾಷಣವು ಪ್ರಮುಖವಾಗಿದೆ ಎಂದು ಆಯುಷ್ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು