ನವದೆಹಲಿ: ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ಪೂರೈಕೆ ಕುರಿತು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ‘ಉನ್ನತ ಮಟ್ಟ‘ದ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್–19 ಎರಡನೇ ಅಲೆ ತೀವ್ರವಾದಾಗ, ದೇಶದ ವಿವಿಧ ಭಾಗಗಳಲ್ಲಿರುವ ಆಸ್ಪತ್ರೆಗಳಲ್ಲಿವೈದ್ಯಕೀಯ ಆಮ್ಲಜನಕದ ಕೊರತೆ ಇರುವುದಾಗಿ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದೆ.
ಈಗ ಕೋವಿಡ್–19 ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು, ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಅರಿಯುವುದಕ್ಕಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.