ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿಯಿಂದ ಸೆ. 18ರಂದು ಸಚಿವಾಲಯಗಳ ಪರಿಶೀಲನಾ ಸಭೆ

Last Updated 16 ಸೆಪ್ಟೆಂಬರ್ 2021, 16:36 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ಸಚಿವಾಲಯಗಳು ಹಾಗೂ ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ಸೆ.18) ಪರಿಶೀಲನಾ ಸಭೆ ನಡೆಸುವರು ಎಂದು ಮೂಲಗಳು ತಿಳಿಸಿವೆ.

ಸಭೆಯ ಕಾರ್ಯಸೂಚಿ ಕುರಿತು ಹೆಚ್ಚಿನ ವಿವರಗಳು ತಕ್ಷಣಕ್ಕೆ ಲಭ್ಯ ಇಲ್ಲ ಎಂದು ಮೂಲಗಳು ಹೇಳಿವೆ.

ಇತ್ತೀಚೆಗಷ್ಟೇ ಮೋದಿ ಅವರು ಸಚಿವರ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಈಗ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಆಯೋಜಿಸಲಾಗಿದೆ.

ಕೋವಿಡ್‌ ಪಿಡುಗಿನಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ದೇಶದ ಆರ್ಥಿಕತೆಗೂ ಪೆಟ್ಟು ಬಿದ್ದಿದೆ. ಆರ್ಥಿಕತೆಗೆ ಪುನಶ್ಚೇತನ ನೀಡುವುದು ಸೇರಿದಂತೆ ಕೇಂದ್ರ ಸರ್ಕಾರ ವಿವಿಧ ಉತ್ತೇಜನಾ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಈ ಸಭೆಗೆ ಮಹತ್ವ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT