ಶನಿವಾರ, ಜುಲೈ 2, 2022
22 °C

ಚೆನ್ನೈ, ಹೈದರಾಬಾದ್‌ಗೆ ಗುರುವಾರ ಮೋದಿ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಮೇ 26) ಚೆನ್ನೈ ಮತ್ತು ಹೈದರಾಬಾದ್‌ಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆ (ನಗರ) ಅಡಿಯಲ್ಲಿ ‘ಲೈಟ್ ಹೌಸ್ ಪ್ರಾಜೆಕ್ಟ್– ಚೆನ್ನೈ’ನ ಭಾಗವಾಗಿ ₹ 116 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 1,152 ಮನೆಗಳನ್ನು ಮೋದಿ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಅಮೆರಿಕ ಮತ್ತು ಫಿನ್‌ಲ್ಯಾಂಡ್‌ನಲ್ಲಿ ಬಳಸಲಾಗುವ ಪ್ರಿಕಾಸ್ಟ್ ಕಾಂಕ್ರಿಟ್ ವ್ಯವಸ್ಥೆಯನ್ನು ಬಳಸಿ ಈ ಮನೆಗಳನ್ನು ನಿರ್ಮಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ನಿರ್ಮಾಣ ಕ್ಷೇತ್ರದಲ್ಲಿ ನವ ಜಾಗತಿಕ ತಂತ್ರಜ್ಞಾನವನ್ನು ಬೃಹತ್ ಪ್ರಮಾಣದಲ್ಲಿ ಬಳಸಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಐಎಸ್‌ಬಿ ಸಂಭ್ರಮಾಚರಣೆ: ಹೈದರಾಬಾದ್‌ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ. 

ಗುರುವಾರ ಮಧ್ಯಾಹ್ನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೋದಿ ಅವರು ಐಎಸ್‌ಬಿಯ ಹೈದರಾಬಾದ್ ಮತ್ತು ಮೊಹಲಿ ಕ್ಯಾಂಪಸ್‌ನ ಸುಮಾರು 900 ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

ಪ‍್ರಧಾನಿ ಭೇಟಿಯ ಕಾರಣ ಚೆನ್ನೈ ಮತ್ತು ಹೈದರಾಬಾದ್‌ಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು