ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.7ಕ್ಕೆ ಪ್ರಧಾನಿ ಮೋದಿ ಅವರಿಂದ 35 ಆಮ್ಲಜನಕ ಘಟಕಗಳ ಉದ್ಘಾಟನೆ

Last Updated 6 ಅಕ್ಟೋಬರ್ 2021, 12:03 IST
ಅಕ್ಷರ ಗಾತ್ರ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಅ.7) ಉದ್ಘಾಟಿಸುವರು.

ಉತ್ತರಾಖಂಡದ ಹೃಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್‌) ಶಾಖೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಧಾನಮಂತ್ರಿ ಕಚೇರಿ (ಪಿಎಂಒ) ಪ್ರಕಟಣೆ ತಿಳಿಸಿದೆ.

‘ಈ ಘಟಕಗಳ ಉದ್ಘಾಟನೆಯೊಂದಿಗೆ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಆಮ್ಲಜನಕ ಘಟಕಗಳನ್ನು ಹೊಂದಿದಂತಾಗಲಿದೆ’ ಎಂದು ಪಿಎಂಒ ತಿಳಿಸಿದೆ.

‘ಕೋವಿಡ್‌ ಪಿಡುಗು ಕಾಣಿಸಿಕೊಂಡ ನಂತರ, ದೇಶದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕ ಲಭ್ಯತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ಘಟಕಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗಾಗಿ 7 ಸಾವಿರಕ್ಕೂ ಅಧಿಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ’ ಎಂದೂ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT